News Karnataka Kannada
Friday, May 03 2024
ಸಾಂಡಲ್ ವುಡ್

ಸ್ಯಾಂಡಲ್ ವುಡ್: ಇಂದು ಕನ್ನಡ ಚಿತ್ರರಂಗದ ಖ್ಯಾತ ನಟಿ ಅಮೂಲ್ಯ ಹುಟ್ಟುಹಬ್ಬ

Amulya
Photo Credit : News Kannada

ಸ್ಯಾಂಡಲ್ ವುಡ್: ಇಂದು ಕನ್ನಡ ಚಿತ್ರರಂಗದ ಖ್ಯಾತ ನಟಿ ಅಮೂಲ್ಯ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ತಮ್ಮ ನೆಚ್ಚಿನ ನಟಿಯ ಜನ್ಮದಿನಕ್ಕೆ ಶುಭ ಕೋರಿದ್ದಾರೆ. ಕುಟುಂಬದವರು, ಸೆಲೆಬ್ರಿಟಿಗಳು ಮತ್ತು ಸ್ನೇಹಿತರಿಂದಲೂ ಶುಭಾಶಯಗಳು ಹರಿದುಬರುತ್ತಿವೆ.

ಅವಳಿ ಗಂಡು ಮಕ್ಕಳಿಗೆ ಜನ್ಮನೀಡಿದ ಅಮೂಲ್ಯ ಅವರು ಸದ್ಯಕ್ಕೆ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಪತಿ ಜಗದೀಶ್​ ಅವರು ವಿಶೇಷವಾಗಿ ವಿಶ್​ ಮಾಡಿಕೊಂಡಿದ್ದಾರೆ. ತಮ್ಮ ಪಾಲಿಗೆ ಈ ದಿನವೇ ‘ವ್ಯಾಲೆಂಟೈನ್​ ಡೇ’ ಎಂದು ಅವರು ಹೇಳಿದ್ದಾರೆ.

ಅಮೂಲ್ಯ ಜತೆ ಕ್ಲಿಕ್ಕಿಸಿಕೊಂಡಿರುವ ಹತ್ತಾರು ಫೋಟೋಗಳನ್ನು ಜಗದೀಶ್​ ಅವರು ಹಂಚಿಕೊಂಡಿದ್ದಾರೆ. ‘ನನಗೆ ಸೆಪ್ಟೆಂಬರ್​ 14 ವ್ಯಾಲೆಂಟೈನ್​ ಡೇ. ಹುಟ್ಟುಹಬ್ಬದ ಶುಭಾಶಯಗಳು ಅಮೂಲ್ಯ. ನೀನು ಯಾವಾಗಲೂ ಮಿನುಗುವ ನಕ್ಷತ್ರವಾಗಿರಬೇಕು. ಇದು ನಾವು ಕಳೆದ ಪ್ರೀತಿಯ ಕ್ಷಣಗಳು’ ಎಂದು ಈ ಪೋಸ್ಟ್​ಗೆ ಅವರು ಕ್ಯಾಪ್ಷನ್​ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು