ಬೆಂಗಳೂರು: ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾ ಇಂದು ಸಖತ್ ಅದ್ದೂರಿಯಾಗಿ ತೆರೆಗೆ ಬರುತ್ತಿದೆ.
ಸುಮಾರು ಒಂದು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬನಾರಸ್ ಬಿಡುಗಡೆ ಆಗುತ್ತಿದ್ದು, ಕನ್ನಡದ ಜೊತೆ ಜೊತೆಗೆ ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ.
ಹೊಸ ನಟನೊಬ್ಬನ ಮೊದಲ ಸಿನಿಮಾ ಈ ಪ್ರಮಾಣದಲ್ಲಿ ರಿಲೀಸ್ ಆಗುತ್ತಿರುವುದು ಇದೇ ಮೊದಲು ಎನ್ನುವುದು ದಾಖಲೆ.
ಕನ್ನಡದಲ್ಲಿ 180ಕ್ಕೂ ಹೆಚ್ಚು ಥಿಯೇಟರ್ ನಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದ್ದರೆ, ಹಿಂದಿಯಲ್ಲಿ 500 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ. ತಮಿಳು ಮತ್ತು ತೆಲುಗಿನಲ್ಲಿ ತಲಾ 150 ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಆಗಲಾಗುತ್ತಿದೆ. ಮಲಯಾಳಂನಲ್ಲೂ 50ಕ್ಕೂ ಅಧಿಕ ಚಿತ್ರಮಂದಿರಗಳು ಸಿಕ್ಕಿವೆ ಅಂತೆ.
ಹಾಗಾಗಿ ಸಾವಿರಾರು ಚಿತ್ರಮಂದಿರಗಳಲ್ಲಿ ಬನಾರಸ್ ಪ್ರದರ್ಶನ ಕಾಣುತ್ತಿದೆ. ಹಾಗಾಗಿ ಸಹಜವಾಗಿಯೇ ಚಿತ್ರತಂಡಕ್ಕೆ ಪ್ರೇಕ್ಷಕರು ಸಿನಿಮಾ ಹೇಗೆ ಸ್ವೀಕರಿಸುತ್ತಾರೆ ಎಂದು ನಿರೀಕ್ಷಿಸುತ್ತಿದೆ.