ರಕ್ಷಿತ್ ಶೆಟ್ಟಿ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಒಟಿಟಿಯಲ್ಲಿ ಲಭ್ಯವಾಗಿದೆ. ಜನವರಿ 25ರ ಮಧ್ಯರಾತ್ರಿಯಿಂದಲೇ ಅಮೆಜಾನ್ ಪ್ರೈಂ ವಿಡಿಯೋದಲ್ಲಿ ನೋಡಬಹುದು ಎಂದು ನಿರ್ದೇಶಕ ಹೇಮಂತ್ ರಾವ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಕೇವಲ ಕನ್ನಡದಲ್ಲಿ ಮಾತ್ರವಲ್ಲ, ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ನೆಲದಲ್ಲೂ ಸದ್ದು ಮಾಡಿತ್ತು. ಸ್ಯಾಂಡಲ್ವುಡ್ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿತ್ತು.
‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.