ರಕ್ಷಿತ್ ಶೆಟ್ಟಿ ನಟನೆಯ ಸೂಪರ್ ಹಿಟ್ ಚಿತ್ರ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಥಿಯೇಟರ್ ಹಾಗೂ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣೋಕೆ ರೆಡಿ ಆಗಿದೆ. ರಕ್ಷಿತ್ ಶೆಟ್ಟಿ ನಿರ್ಮಾಣದ, ಹೇಮಂತ್ ಬಿ ರಾವ್ ನಿರ್ದೇಶನದ ಈ ಚಿತ್ರ ಜೀ ಕನ್ನಡದಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಭಾನುವಾರ (ಮಾರ್ಚ್ 10) ರಾತ್ರಿ 7:30ಕ್ಕೆ ಸಿನಿಮಾ ಪ್ರಸಾರ ಕಾಣಲಿದೆ. ಈ ಬಗ್ಗೆ ಜೀ ಕನ್ನಡ ವಾಹಿನಿ ಮಾಹಿತಿ ಹಂಚಿಕೊಂಡಿದೆ.
ಈ ಸಿನಿಮಾದಲ್ಲಿ ರಕ್ಷಿತ್ ಮನು ಆಗಿ ಕಾಣಿಸಿಕೊಂಡಿದ್ದು ಮುಗ್ಧ ಪ್ರೀತಿಯ ಪ್ರತಿರೂಪವನ್ನು ಈ ಚಿತ್ರದ ಮೂಲಕ ತೋರಿಸಿದ್ದಾರೆ ಹಾಗೂ ತನ್ನ ಮುಂದಿನ ಜೀವನ ಕುರಿತು ಕನಸು ಕಟ್ಟಕೊಂಡದ್ದು ಕೊನೆಗೂ ಕನಸಾಗೆ ಉಳಿಯುತ್ತದೆ ಪ್ರೀತಿ ಕೊನೆಗೊಂಡಾಗ ಆಗೋ ನೋವಿನ ಕಥೆಯನ್ನು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಚಿತ್ರದಲ್ಲಿ ತೋರಿಸಲಾಗಿದೆ. ಈ ಸಿನಿಮಾನ ಥಿಯೇಟರ್ ಹಾಗೂ ಒಟಿಟಿಯಲ್ಲಿ ಮಿಸ್ ಮಾಡಿಕೊಂಡವರು ಟಿವಿಯಲ್ಲಿ ವೀಕ್ಷಿಸಬಹುದು.
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಸಿನಿಮಾ 2023ರ ಸೆಪ್ಟೆಂಬರ್ 1ರಂದು ರಿಲೀಸ್ ಆಯಿತು. ರುಕ್ಮಿಣಿ ವಸಂತ್ ಪ್ರಿಯಾ ಆಗಿ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಒಟಿಟಿಯಲ್ಲಿ ರಿಲೀಸ್ ಆಗಿದೆ. ಇದು ಮುಂದಿನ ದಿನಗಳಲ್ಲಿ ಟಿವಿಯಲ್ಲಿ ಪ್ರಸಾರ ಕಾಣಲಿದೆ.