ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿ ಕಟ್ಟುಮಸ್ತಾದ ದೇಹ ಪ್ರದರ್ಶಿಸಿದ್ದ ಸುದೀಪ್ ಹೊಸ ಚಿತ್ರ ‘K 46’ ಚಿತ್ರದಲ್ಲಿಯೂ ಕಟ್ಟು ಮಸ್ತಾಗಿ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ಅವರು ದೇಹ ದಂಡಿಸಿದ್ದಾರೆ.
ಸದೃಢ ಮೈಕಟ್ಟಿನೊಂದಿಗೆ ಕಾಣಿಸಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ತಮಿಳುನಾಡಿನ ಕಲೈಪುಲಿ ಎಸ್. ತನು ಅವರೊಂದಿಗೆ ಕಿಚ್ಚ ಕ್ರಿಯೇಶನ್ಸ್ ಬ್ಯಾನರ್ ನಲ್ಲಿ ‘K 46’ ಸಿನಿಮಾ ನಿರ್ಮಾಣವಾಗುತ್ತಿದ್ದು, ವಿಜಯ್ ಕಾರ್ತಿಕೇಯನ್ ನಿರ್ದೇಶನ ಮಾಡಿದ್ದಾರೆ.
ತಮಿಳುನಾಡಿನ ಮಹಾಬಲಿಪುರಂನಲ್ಲಿ ಚಿತ್ರೀಕರಣ ನಡೆದಿದ್ದು, ಒಂದು ಶೆಡ್ಯೂಲ್ ಚಿತ್ರೀಕರಣ ಮುಗಿಸಿ ಬಂದಿರುವ ಸುದೀಪ್ ಮುಂದಿನ ಚಿತ್ರೀಕರಣಕ್ಕೆ ತಯಾರಿ ಮಾಡಿಕೊಂಡಿದ್ದಾರೆ. ಸೆಪ್ಟೆಂಬರ್ 2 ರಂದು ಸುದೀಪ್ ಹುಟ್ಟುಹಬ್ಬದ ದಿನ ಚಿತ್ರದ ಟೈಟಲ್ ಮತ್ತು ಹೆಚ್ಚಿನ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.