ಸ್ಯಾಂಡಲ್ ವುಡ್ ನಟ ಡಾರ್ಲಿಂಗ್ ಕೃಷ್ಣ ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಹುಟ್ಟು ಹಬ್ಬಕ್ಕಾಗಿ ‘ಶುಗರ್ ಫ್ಯಾಕ್ಟರಿ’ ಚಿತ್ರತಂಡ ವಿಶೇಷ ಪೋಸ್ಟರ್ ಒಂದನ್ನು ರಿಲೀಸ್ ಮಾಡಿದೆ. ಈ ಮೂಲಕ ತನ್ನ ಚಿತ್ರದ ನಾಯಕನಿಗೆ ಚಿತ್ರತಂಡ ಶುಭಾಶಯ ತಿಳಿಸಿದೆ.
ದೀಪಕ್ ಅರಸ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ನಟಿ ಅಮೂಲ್ಯ ಸಹೋದರರಾಗಿರುವ ದೀಪಕ್ ಅರಸ್ ಈ ಹಿಂದೆ ಅಮೂಲ್ಯ, ರಾಕೇಶ್ ಅಡಿಗ ಜೋಡಿಯ ಮನಸಾಲಜಿ ಚಿತ್ರ ನಿರ್ದೇಶಿಸಿದ್ದರು, ಇದೀಗ ಎರಡನೇ ಸಿನಿಮಾವಾಗಿ ಶುಗರ್ ಫ್ಯಾಕ್ಟರಿ ಚಿತ್ರ ನಿರ್ದೇಶನ ಮಾಡುತ್ತಿದ್ದು, ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನ ದೀಪಕ್ ಅರಸ್ ಅವರೇ ಬರೆದಿದ್ದಾರೆ.
ಫನ್ ರೋಮ್ಯಾಂಟಿಕ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದು, ಅದ್ವಿತಿ ಶೆಟ್ಟಿ, ಸೊನಾಲ್ ಮೊಂಥೆರೋ, ಶಿಲ್ಪಾ ಶೆಟ್ಟಿ ಶುಗರ್ ಫ್ಯಾಕ್ಟರಿ ನಟಿಮಣಿಯರಾಗಿ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ.