ಬೆಂಗಳೂರು: ಖ್ಯಾತ ನಟಿ ತ್ರಿಶಾ ಸೇರಿದಂತೆ ಹಲವು ಸ್ಟಾರ್ಗಳು ನಟಿಸಿರುವ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾದ ಪ್ರಚಾರಕ್ಕಾಗಿ ಸೆ.23ರಂದು ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ತ್ರಿಶಾ, ಪುನೀತ್ ರಾಜ್ಕುಮಾರ್ ಅವರನ್ನು ನೆನೆದು, ನಾನು ಪುನೀತ್ ರಾಜ್ಕುಮಾರ್ ಅವರನ್ನು ಬಹಳ ಮಿಸ್ ಮಾಡಿಕೊಳ್ಳುತ್ತೇನೆ” ಎಂದಿದ್ದಾರೆ. ”ನಾನು ಈ ಹಿಂದೆ ‘ಪವರ್’ ಸಿನಿಮಾದ ಚಿತ್ರೀಕರಣಕ್ಕಾಗಿ ಬೆಂಗಳೂರಿಗೆ ಬಂದಿದ್ದೆ ಎಂದರು. ಈಗಲೂ ನಾನು ಪುನೀತ್ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನನ್ನ ಹೃದಯ ಒಡೆದಿದೆ. ಅವರ ನೆನಪು ಸದಾ ನನ್ನೊಂದಿಗೆ ಹಾಗೆಯೇ ಉಳಿಯಲಿದೆ” ಎಂದರು.
ನಾನು ಸಣ್ಣವಳ್ಳಿದ್ದಾಗ ಸಾಕಷ್ಟು ಸಮಯವನ್ನು ಬೆಂಗಳೂರಿನಲ್ಲಿ ಕಳೆದಿದ್ದೇನೆ. ಇದು ನನಗೆ ಎರಡನೇ ಮನೆ ಇದ್ದಂತೆ ಎಂದಿದ್ದಾರೆ.
‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ಬಗ್ಗೆ ಮಾತನಾಡಿದ ತ್ರಿಶಾ, ಸಿನಿಮಾ ಚೆನ್ನಾಗಿ ಬಂದಿದೆ. ನಮಗೆಲ್ಲರಿಗೂ ಈ ಸಿನಿಮಾದ ಮೇಲೆ ನಂಬಿಕೆ ಇದೆ. ದಯವಿಟ್ಟು ನೀವುಗಳು ಸಹ ಸಿನಿಮಾವನ್ನು ನೋಡಿ ಆನಂದಿಸಿ” ಎಂದು ಮನವಿ ಮಾಡಿದರು.