ಬೆಂಗಳೂರು: ಮೋಹಕ ತಾರೆ ರಮ್ಯಾ 8 ವರ್ಷಗಳ ನಂತರ ಮತ್ತೆ ಬಣ್ಣದ ಲೋಕಕ್ಕೆ ಬರುತ್ತಾರೆ ಎಂದು ಹೇಳಲಾಗುತ್ತಿತ್ತು. ʼಉತ್ತರಕಾಂಡʼ ಸಿನಿಮಾದಲ್ಲಿ ಡಾಲಿ ಧನಂಜಯ್ಗೆ ಜೋಡಿಯಾಗಿ ಮೋಹಕ ತಾರೆ ಕಾಣಿಸಿಕೊಂಡು ಸ್ಯಾಂಡಲ್ವುಡ್ನಲ್ಲಿ ಹಂಗಮಾ ಸೃಷ್ಟಿ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ನಟಿಸುವುದಿಲ್ಲ ಎನ್ನುವ ಸುದ್ದಿ ಹೊರ ಬಿದ್ದಿದ್ದು ಈ ಬಗ್ಗೆ ಸ್ವತಃ ರಮ್ಯಾ ಮಾಹಿತಿ ಹಂಚಿಕೊಂಡಿದ್ದಾರೆ.
ರಮ್ಯಾ ಅವರು ಈ ಬಗ್ಗೆ ತಮ್ಮ ಅಧಿಕೃತ ಇನ್ಸ್ಟಾದ ಸ್ಟೇಟಸ್ನಲ್ಲಿ “ಉತ್ತರಕಾಂಡ ಸಿನಿಮಾದಲ್ಲಿ ಅಭಿನಯಿಸುತ್ತಿಲ್ಲ” ಎಂದು ಹೇಳಿಕೊಂಡಿದ್ದಾರೆ. “ಡೇಟ್ಸ್ ಇಲ್ಲದ ಕಾರಣದಿಂದ ನಾನು ಉತ್ತರಾಖಂಡ ಸಿನಿಮಾದ ಕೆಲಸದಿಂದ ಹೊರ ಬಂದಿದ್ದೇನೆ. ಸಿನಿಮಾ ತಂಡಕ್ಕೆ ಶುಭ ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಉತ್ತರಕಾಂಡ ಸಿನಿಮಾದಲ್ಲಿ ಡಾಲಿ ನಟಿಸುತ್ತಿದ್ದು ಇದಕ್ಕೆ ಕೆಆರ್ಜಿ ನಿರ್ಮಾಣ ಸಂಸ್ಥೆ ಬಂಡವಾಳ ಹೂಡುತ್ತಿದೆ. ಅಲ್ಲದೇ ಪ್ರಮುಖ ಪಾತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಅಭಿನಯ ಮಾಡುತ್ತಿದ್ದಾರೆ. ಆದರೆ ರಮ್ಯಾ ಅವರು ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಇದಕ್ಕಾಗಿ ರಮ್ಯಾ ಕೂಡ ಸಾಕಷ್ಟು ತಯಾರಿ ನಡೆಸಿದ್ದರು. ಬಹಳ ವರ್ಷಗಳ ನಂತರ ಸ್ಯಾಂಡಲ್ವುಡ್ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಈಗ ರಮ್ಯಾ ಅವರೇ ನಾನು ನಟಿಸುತ್ತಿಲ್ಲ ಎಂದು ಹೇಳಿದ್ದಾರೆ. ಇದು ಮೋಹಕತಾರೆಯ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದೆ.