ಮೋಹಕ ತಾರೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ

ಬೆಂಗಳೂರು: ಮೋಹಕ ತಾರೆ ರಮ್ಯಾ 8 ವರ್ಷಗಳ ನಂತರ ಮತ್ತೆ ಬಣ್ಣದ ಲೋಕಕ್ಕೆ ಬರುತ್ತಾರೆ ಎಂದು ಹೇಳಲಾಗುತ್ತಿತ್ತು. ʼಉತ್ತರಕಾಂಡʼ ಸಿನಿಮಾದಲ್ಲಿ ಡಾಲಿ ಧನಂಜಯ್​ಗೆ ಜೋಡಿಯಾಗಿ ಮೋಹಕ ತಾರೆ ಕಾಣಿಸಿಕೊಂಡು ಸ್ಯಾಂಡಲ್​ವುಡ್​ನಲ್ಲಿ ಹಂಗಮಾ ಸೃಷ್ಟಿ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ನಟಿಸುವುದಿಲ್ಲ ಎನ್ನುವ ಸುದ್ದಿ ಹೊರ ಬಿದ್ದಿದ್ದು ಈ ಬಗ್ಗೆ ಸ್ವತಃ ರಮ್ಯಾ ಮಾಹಿತಿ ಹಂಚಿಕೊಂಡಿದ್ದಾರೆ.

ರಮ್ಯಾ ಅವರು ಈ ಬಗ್ಗೆ ತಮ್ಮ ಅಧಿಕೃತ ಇನ್​ಸ್ಟಾದ ಸ್ಟೇಟಸ್​ನಲ್ಲಿ “ಉತ್ತರಕಾಂಡ ಸಿನಿಮಾದಲ್ಲಿ ಅಭಿನಯಿಸುತ್ತಿಲ್ಲ” ಎಂದು ಹೇಳಿಕೊಂಡಿದ್ದಾರೆ. “ಡೇಟ್ಸ್​ ಇಲ್ಲದ ಕಾರಣದಿಂದ ನಾನು ಉತ್ತರಾಖಂಡ ಸಿನಿಮಾದ ಕೆಲಸದಿಂದ ಹೊರ ಬಂದಿದ್ದೇನೆ. ಸಿನಿಮಾ ತಂಡಕ್ಕೆ ಶುಭ ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಉತ್ತರಕಾಂಡ ಸಿನಿಮಾದಲ್ಲಿ ಡಾಲಿ ನಟಿಸುತ್ತಿದ್ದು ಇದಕ್ಕೆ ಕೆಆರ್​ಜಿ ನಿರ್ಮಾಣ ಸಂಸ್ಥೆ ಬಂಡವಾಳ ಹೂಡುತ್ತಿದೆ. ಅಲ್ಲದೇ ಪ್ರಮುಖ ಪಾತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್​ ಕುಮಾರ್​ ಕೂಡ ಅಭಿನಯ ಮಾಡುತ್ತಿದ್ದಾರೆ. ಆದರೆ ರಮ್ಯಾ ಅವರು ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಇದಕ್ಕಾಗಿ ರಮ್ಯಾ ಕೂಡ ಸಾಕಷ್ಟು ತಯಾರಿ ನಡೆಸಿದ್ದರು. ಬಹಳ ವರ್ಷಗಳ ನಂತರ ಸ್ಯಾಂಡಲ್​ವುಡ್​ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಈಗ ರಮ್ಯಾ ಅವರೇ ನಾನು ನಟಿಸುತ್ತಿಲ್ಲ ಎಂದು ಹೇಳಿದ್ದಾರೆ.  ಇದು ಮೋಹಕತಾರೆಯ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದೆ.

Ashitha S

Recent Posts

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…

3 mins ago

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…

18 mins ago

ಪೂಂಚ್​ನಲ್ಲಿ ವಾಯುಪಡೆಯ ವಾಹನದ ಮೇಲೆ ದಾಳಿ ಮಾಡಿದ ಉಗ್ರರ ಸುಳಿವು ಪತ್ತೆ

ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ  ನಡೆದ ಉಗ್ರರ ದಾಳಿಯಲ್ಲಿ IAF ಕಾರ್ಪೋರಲ್ ವಿಕ್ಕಿ ಪಹಡೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.

34 mins ago

ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದ ಅಣ್ಣಾಮಲೈ

ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು…

1 hour ago

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…

1 hour ago

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…

1 hour ago