News Karnataka Kannada
Monday, April 29 2024
ಸಾಂಡಲ್ ವುಡ್

ನಟಿ ರಮ್ಯಾ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹಬ್ಬಿಸಿದ್ದು ಯಾರು?

Who spread the news of actress Ramya's death?
Photo Credit : Facebook

ಬೆಂಗಳೂರು: ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ’ ಎನ್ನುವ ಸುದ್ದಿ ಇಂದು (ಸೆಪ್ಟೆಂಬರ್ 6) ವೈರಲ್ ಆಯಿತು. ತಮಿಳು ಮಾಧ್ಯಮಗಳು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವರದಿ ಮಾಡಿದ್ದವು. ಆದರೆ, ಇದು ಸುಳ್ಳು ಸುದ್ದಿ ಅನ್ನೋ ಬಗ್ಗೆ ಸ್ಪಷ್ಟನೆ ಸಿಕ್ಕಿದೆ.

‘ರಮ್ಯಾ ಆರೋಗ್ಯವಾಗಿದ್ದಾರೆ’ ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಮ್ಯಾ ಅವರು ಈ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ನೀಡಬೇಕಿದೆ.

ರಮ್ಯಾ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ರಾಜಕೀಯಕ್ಕೆ ತೆರಳಿದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದುಕೊಂಡರು. ರಾಜಕೀಯವನ್ನೂ ತೊರೆದ ಬಳಿಕ ಅವರು ಯಾರ ಕೈಗೂ ಸಿಕ್ಕಿರಲಿಲ್ಲ. ಈಗ ಅವರು ಸೋಶಿಯಲ್ ಮೀಡಿಯಾ ಹಾಗೂ ಚಿತ್ರರಂಗಕ್ಕೆ ಮರಳಿದ್ದಾರೆ.

ಈ ಸಂದರ್ಭದಲ್ಲೇ ಅವರಿಗೆ ಹೃದಯಾಘಾತ ಆಗಿದೆ ಎನ್ನುವ ಸುಳ್ಳು ಸುದ್ದಿ ಹರಿದಾಡಿತ್ತು. ರಮ್ಯ ಹೆಸರಿನ ತಮಿಳು ಕಿರುತೆರೆ ನಟಿ ಮೃತಪಟ್ಟಿದ್ದರು ಎನ್ನಲಾಗಿದೆ. ಈ ವಿಚಾರ ಹೇಳುವಾಗ ತಮಿಳುನಾಡಿನ ಕೆಲವರು ರಮ್ಯಾ ದಿವ್ಯಾ ಸ್ಪಂದನಾ ಫೋಟೋ ಹಂಚಿಕೊಂಡಿದ್ದಾರೆ. ಆ ಬಳಿಕ ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಈಗ ರಮ್ಯಾ ಅವರು ಆರಾಮಾಗಿದ್ದಾರೆ ಎನ್ನುವ ಸುದ್ದಿ ತಿಳಿದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು