ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿ ಟಾಕ್ಸಿಕ್‌ ನಟ ಯಶ್

ಬೆಂಗಳೂರು: ಸ್ಯಾಂಡಲ್ ವುಡ್ ನ ಸ್ಟಾರ್ ನಟ, ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಅವರ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಹೀಗಾಗಿ ಎಲ್ಲಾ ಕಡೆಯಿಂದಲೂ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ.

ಯಶ್ ಗೆ ಕರ್ನಾಟಕ ಮಾತ್ರವಲ್ಲ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಎಲ್ಲರೂ ಯಶ್​ಗೆ ಬರ್ತ್​ಡೇ ಶುಭಾಶಯ ತಿಳಿಸುತ್ತಿದ್ದಾರೆ. ಯಶ್ ಅವರು ಏಕಾಏಕಿ ದೊಡ್ಡ ಸ್ಟಾರ್ ಆದವರಲ್ಲ. ಬಣ್ಣದ ಲೋಕಕ್ಕೆ ಕಾಲಿಡುವಾಗ ಅವರಿಗೆ ಯಾವುದೇ ಹಿನ್ನೆಲೆ ಇರಲಿಲ್ಲ. ಧಾರಾವಾಹಿ ಮೂಲಕ ವೃತ್ತಿಜೀವನ ಆರಂಭಿಸಿದ ಯಶ್ ನಂತರ ಚಿತ್ರರಂಗಕ್ಕೆ ಕಾಲಿಟ್ಟರು. ಈಗ ತಮ್ಮ ಸಾಮ್ರಾಜ್ಯವನ್ನು ಪ್ಯಾನ್ ಇಂಡಿಯಾ ಮಟ್ಟಕ್ಕೆ ವಿಸ್ತರಿಸಿಕೊಂಡಿದ್ದಾರೆ.

ಇನ್ನೂ ಯಶ್ ಅವರು ಟ್ಯಾಕ್ಸಿಕ್ಸ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಇರುವ ಕಾರಣ ಅಭಿಮಾನಿಗಳ ಜೊತೆ ಬರ್ತ್​ಡೇ ಆಚರಣೆ ಸಾಧ್ಯವಿಲ್ಲ ಎಂದು ಯಶ್ ಈಗಾಗಲೇ ತಿಳಿಸಿದ್ದಾರೆ. ಕೆಜಿಎಫ್ 2 ಸಿನಿಮಾದ ನಂತರ ನಟ ಮತ್ತೇ  ʼಟ್ಯಾಕ್ಸಿಕ್ಸ್ʼ ಚಿತ್ರದ ಮೂಲಕ ಅದ್ಧೂರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಈಗಾಗಲೇ ಅಭಿಮಾನಿಗಳು ತಮ್ಮ ಪ್ರೊಫೈಲ್‌ ಫಿಕ್ಚರ್‌ ಮಾಡಲು ಸಿಡಿಪಿ (ಕಾಮನ್‌ ಡಿಪಿ)ಯೊಂದು ದೊರಕಿದೆ. ಸ್ವತಃ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸಿಡಿಪಿ ಹಂಚಿಕೊಂಡಿದ್ದಾರೆ. ಶಿವಣ್ಣ ಕೈಯಿಂದ ಬಿಡುಗಡೆಗೊಂಡ ಸಿಡಿಪಿ ನೋಡಿ ಯಶ್‌ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

“ಯಶ್ ಹಾಗೂ ಅವರ ಎಲ್ಲಾ ಅಭಿಮಾನಿಗಳಿಗೂ ಶುಭಾಶಯಗಳು. CDP ತುಂಬಾ ಚೆನ್ನಾಗಿದೆ” ಎಂದು ಶಿವರಾಜ್‌ ಕುಮಾರ್‌ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಪೋಸ್ಟರ್‌ ತುಂಬಾ ಆಕರ್ಷಕವಾಗಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಯಶ್‌ ಅಭಿಮಾನಿಗಳು “ಥ್ಯಾಂಕ್‌ ಯು ಶಿವಣ್ಣ” “ಕಿಂಗ್‌ ವಿಷ್‌ ಮಾಡಿದ ಮೇಲೆ ನಮ್ಮದೇನಿದೆ” ಎಂದೆಲ್ಲ ಖುಷಿ ವ್ಯಕ್ತಪಡಿಸಿದ್ದಾರೆ. “ದರ್ಶನ್‌ ಹುಟ್ಟುಹಬ್ಬಕ್ಕೂ ಇದೇ ರೀತಿ ಪೋಸ್ಟರ್‌ ಬಿಡುಗಡೆ ಮಾಡಿ ಶಿವಣ್ಣ” ಎಂದೂ ಕೆಲವರು ಕಾಮೆಂಟ್‌ ಮಾಡಿದ್ದಾರೆ.

 

Ashitha S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

40 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

54 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago