ಬೆಂಗಳೂರು: ಅನೇಕರು ನ್ಯೂ ಇಯರ್ ಅನ್ನು ಅದ್ಧೂರಿಯಾಗಿ ಆಚರಿಸುವ ಮೂಲಕ 2024ನ್ನು ಬರಮಾಡಿಕೊಂಡಿದ್ದಾರೆ. ಅದರಂತೆಯೇ ಸ್ಯಾಂಡಲ್ವುಡ್ ರಾಕಿಂಗ್ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್ ಹೊಸ ವರ್ಷಕ್ಕೆ ವಿಭಿನ್ನವಾಗಿ ಶುಭಾಶಯ ಕೋರಿದ್ದಾರೆ.
ರಾಧಿಕಾ ಪಂಡಿತ್ ಇನ್ಸ್ಟಾಗ್ರಾಂನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಹಾಗೂ ಮಕ್ಕಳಾದ ಐರಾ ಮತ್ತು ಯಥರ್ವ್ ಜೊತೆಗೆ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ವೈರಲ್ ಆಗಿದೆ.
ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾ ಖಾತೆಯಲ್ಲಿ, “ಪರಿಧಿಯೇ ಇಲ್ಲದ ಪ್ರೀತಿ, ನಿಷ್ಕಲ್ಮಶ ನಗು, ಕನಸುಗಳನ್ನ ಸಾಕಾರಗೊಳಿಸಬಲ್ಲದು… ನಮ್ಮ ಕುಟುಂಬದಿಂದ ನಿಮ್ಮೆಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಷಯಗಳು” ಎಂದು ಬರೆದುಕೊಂಡಿದ್ದಾರೆ.