News Karnataka Kannada
Thursday, May 02 2024
ಸಾಂಡಲ್ ವುಡ್

ʻಸಪ್ತ ಸಾಗರದಾಚೆ ಎಲ್ಲೋʼ ಭಾಗ 2 ರಿಲೀಸ್‌ ಡೇಟ್‌ ಅನೌನ್ಸ್‌

ರಕ್ಷಿತ್​ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ’  ಸಿನಿಮಾ ಬಿಡುಗಡೆಯಾಗಿ ಬಹಳ ದಿನಗಳು ಕಳೆದಿವೆ. ಈಗ ಸದ್ದು ಗದ್ದಲ ಇಲ್ಲದೇ ‘ಅಮೇಜಾನ್​ ಪ್ರೈಂ ವಿಡಿಯೋ’  ಮೂಲಕ ಈ ಸಿನಿಮಾ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ.
Photo Credit : News Kannada

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ರಕ್ಷಿತ್‌ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್‌ ಅಭಿನಯದ ʻಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ಸಕ್ಸಸ್ ಕಂಡಿದೆ. ಪ್ರೇಕ್ಷಕರು ಭಾಗ 2ಕ್ಕೆ ಕಾಯುತ್ತಿದ್ದರು. ಅ.27ಕ್ಕೆ ಸಿನಿಮಾ ರಿಲೀಸ್‌ ಆಗಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿತ್ತು. ಆದರೀಗ ಸಿನಿಮಾ ನವೆಂಬರ್‌ 17ರಂದು ರಿಲೀಸ್‌ ಆಗುತ್ತಿದೆ. ವಿಶೇಷ ಅಂದರೆ ಈ ಬಾರಿ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌ ಆಗುತ್ತಿದೆ.

ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ ಏಕಕಾಲಕ್ಕೆ ನವೆಂಬರ್‌ 17ರಂದು ರಿಲೀಸ್‌ ಆಗುತ್ತಿದೆ. ‘ಸಪ್ತ ಸಾಗರಾಲು ದಾಟಿ’ ಟೈಟಲ್‌ನಲ್ಲಿ ಚಿತ್ರವನ್ನು ತೆಲುಗಿನಲ್ಲಿ ಡಬ್ ಮಾಡಿ ರಿಲೀಸ್ ಮಾಡಿದ್ದಾಗಿದೆ. ಸೈಡ್- A ಒಟಿಟಿಗೆ ಎಂಟ್ರಿ ಕೊಟ್ಟಿದೆ. ಭಾಗ 1 ಒಟಿಟಿಯಲ್ಲಿ ನೋಡದೆ ಇರುವವರು ನೋಡಬಹುದು. ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಜತೆಗೆ ಅಚ್ಯುತ್ ಕುಮಾರ್, ಅವಿನಾಶ್, ಚೈತ್ರಾ ಆಚಾರ್ ಇನ್ನೂ ಕೆಲವರು ನಟಿಸಿದ್ದಾರೆ.

 

View this post on Instagram

 

A post shared by Rakshit Shetty (@rakshitshetty)

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು