News Karnataka Kannada
Sunday, April 28 2024
ಸಾಂಡಲ್ ವುಡ್

60ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಸುಮಲತಾ ಅಂಬರೀಷ್​

Sumalatha Ambareesh turns 60
Photo Credit : News Kannada

ಬೆಂಗಳೂರು: ಬಹುಭಾಷಾ ನಟಿ, ಸಂಸದೆ ಸುಮಲತಾ ಅಂಬರೀಷ್​ ಅವರು ಇಂದು (ಆಗಸ್ಟ್​ 27) ಹುಟ್ಟುಹಬ್ಬದ ಖುಷಿಯಲ್ಲಿದ್ದಾರೆ. ಅವರು 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಚಿತ್ರರಂಗದಲ್ಲಿ ಸಾಕಷ್ಟು ಸಾಧನೆ ಮಾಡಿರುವ ಅವರು, ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. ಎರಡೂ ಕ್ಷೇತ್ರದಲ್ಲಿ ಸುಮಲತಾ ಅಂಬರೀಷ್​ ಅವರಿಗೆ ಸ್ನೇಹಿತರಿದ್ದಾರೆ.

ಎಲ್ಲರ ಸಮ್ಮುಖದಲ್ಲಿ ಅದ್ದೂರಿಯಾಗಿ ಪಾರ್ಟಿ ಮಾಡಲಾಗಿದೆ. ಬೆಂಗಳೂರಿನ ಸ್ಟಾರ್​ ಹೋಟೆಲ್​ನಲ್ಲಿ ಪಾರ್ಟಿ ನಡೆದಿದೆ. ಕನ್ನಡ ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗಿದ್ದಾರೆ. ಎಲ್ಲರೂ ಸುಮಲತಾ ಅಂಬರೀಷ್​ಗೆ ಹುಟ್ಟುಹಬ್ಬ ಶುಭಾಶಯ ತಿಳಿಸುತ್ತಿದ್ದಾರೆ.

ಆಂಧ್ರದಲ್ಲಿ ಹುಟ್ಟಿ, ಬೆಳೆದು ಕನ್ನಡ ಸಿನಿಮಾಗಳಲ್ಲಿ ನಟಿಸಿ ಅಂಬರೀಶ್ ಅವರನ್ನು ಪ್ರೀತಿಸಿ ಮದುವೆಯಾಗಿ ಸುಮಲತಾ ಅಂಬರೀಶ್ ಮಂಡ್ಯ ಸೊಸೆ ಎನಿಸಿಕೊಂಡರು. ಮಂಡ್ಯ ಸಂಸದೆಯಾಗಿರುವ ಸುಮಲತಾ ರಾಜಕೀಯದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

1978ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಎಲ್ಲ ಭಾಷೆಯ ಸ್ಟಾರ್​ ಕಲಾವಿದರ ಜೊತೆ ತೆರೆ ಹಂಚಿಕೊಂಡಿದ್ದಾರೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಮನೆಮಾತಾಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲೂ ಅವರಿಗೆ ಬರ್ತ್​ಡೇ ವಿಶ್​ ಮಾಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು