ಹಾಲಿವುಡ್‌ ನಿರ್ದೇಶಕ ಜೆಜೆ ಪೆರ್ರಿ ಭೇಟಿಯಾದ ಯಶ್‌

ಬೆಂಗಳೂರು: ಜಗತ್ತಿನ ಚಿತ್ರ ರಸಿಕರನ್ನು ತನ್ನೆಡೆಗೆ ನೋಡುವಂತೆ ಮಾಡಿದ ನಟ ರಾಕಿಂಗ್‌ ಸ್ಟಾರ್‌ ಯಶ್‌ ಜನಪ್ರಿಯ ಸ್ಟಂಟ್ ಕೊರಿಯೋಗ್ರಾಫರ್, ಹಾಲಿವುಡ್‌ ನಿರ್ದೇಶಕ ಜೆಜೆ ಪೆರ್ರಿಯನ್ನು ನಟ ಯಶ್ ಲಂಡನ್​ನಲ್ಲಿ ಭೇಟಿ ಆಗಿದ್ದಾರೆ.

ಇಬ್ಬರೂ ಒಟ್ಟಿಗೆ ಫೋಟೊಕ್ಕೆ ಫೋಸು ನೀಡಿದ್ದು, ಆ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಭೇಟಿಯ ಚಿತ್ರವನ್ನು ಪೆರಿ ತಮ್ಮ ಇನ್‌ ಸ್ಟಾ ಅಕೌಂಟ್‌ ನಲ್ಲಿ ಹಂಚಿಕೊಂಡಿದ್ದಾರೆ. ‘ಯಶ್  ಅವರ 19’ ನೇ ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸ ಬಹುತೇಕ ಮುಗಿದಿದೆ ಎನ್ನಲಾಗುತ್ತಿದೆ. ಸದ್ಯ ಯಶ್ ಲುಕ್ ಟೆಸ್ಟ್‌ ನಡೆಯುತ್ತಿದೆ ಎಂದು ತಮಿಳಿನ ಟ್ರೇಡ್ ಅನಲಿಸ್ಟ್ ಮನೋಬಾಲ ವಿಜಯ ಬಾಲನ್ ಈ ಫೋಟೊ ಜೊತೆಗೆ ಮಾಹಿತಿಯನ್ನು ಟ್ವೀಟ್ ಮಾಡಿದ್ದಾರೆ. ಇಷ್ಟೇ ಅಲ್ಲದೆ ಇದೇ ಅಕ್ಟೋಬರ್ ತಿಂಗಳಲ್ಲಿ ಬಿಗ್ ಸಿನಿಮಾವನ್ನು ಅನೌನ್ಸ್ ಮಾಡಲಾಗುತ್ತದೆ ಎಂದೂ ತಿಳಿಸಿದ್ದಾರೆ. ಈ ಸಿನಿಮಾದಲ್ಲಿ ಜೆಜೆ ಪೆರ್ರಿ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ.

ಯಾರು ಈ ಪೆರ್ರಿ: ಜೆಜೆ ಪೆರ್ರಿ ಹಾಲಿವುಡ್‌ನ ಮೆಗಾ ಸಿನಿಮಾಗಳಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ‘ಅವತಾರ್’, ‘ಫಾಸ್ಟ್ ಆಂಡ್ ಫ್ಯೂರಿಯಸ್’, ‘ಎರ್ಗೋ’, ‘ಸ್ಕೈಕ್ರೀಪರ್’, ‘ಎಕ್ಸ್​ಎಕ್ಸ್​ಎಕ್ಸ್’, ‘ಜಾನ್ ವಿಕ್’, ‘ಜಾಂಗೋ ಅನ್​ಚೇನ್ಡ್’, ‘ಸ್ಪೈ’, ‘ದಿ ಎಕ್ಸ್​ಪ್ಯಾಂಡೆಬಲ್ಸ್ 3’ ಅಂತಹ ಹಾಲಿವುಡ್ ಆಕ್ಷನ್ ಸಿನಿಮಾಗಳಿಗೆ ಜೆಜೆ ಪೆರ್ರಿ ಸ್ಟಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಇವರ ಭೇಟಿ ಯಶ್ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ್ದು, ಭರ್ಜರಿ ಸ್ಟಂಟ್‌ಗೆ ರೆಡಿಯಾಗುತ್ತಿದ್ದಾರೆ ಎಂದು ಊಹಿಸಲಾಗಿದೆ.

Sneha Gowda

Recent Posts

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 mins ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

9 mins ago

ಮೊಬೈಲ್ ವಿಚಾರಕ್ಕೆ ಹಲ್ಲೆ: ಆರೋಪಿಗಳು ವಶಕ್ಕೆ

ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ.

14 mins ago

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

33 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

34 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

55 mins ago