ಬೆಂಗಳೂರು: ಸಂತೋಷ್ ಆನಂದ್ರಾಮ್ ನಿರ್ದೇಶನದಲ್ಲಿ ಮೂಡಿಬಂದ ‘ಯುವ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಯುವ ರಾಜ್ಕುಮಾರ್ ಅವರಿಗೆ ಈ ಚಿತ್ರದಿಂದ ದೊಡ್ಡ ಗೆಲುವು ಸಿಕ್ಕಿದೆ.
ಈಗ ಯುವ ಎರಡನೇ ಸಿನಿಮಾ ಬಗ್ಗೆ ಅಪ್ಡೇಟ್ ಸಿಕ್ಕಿದ್ದು, ರಾಜ್ಕುಮಾರ್ ಜನ್ಮದಿನದಂದು ಅವರ ಹೊಸ ಸಿನಿಮಾ ಅನೌನ್ಸ್ ಆಗೋ ಸಾಧ್ಯತೆ ಇದೆಯಂತೆ.
‘ಯುವ’ ಸಿನಿಮಾ ತಂಡ ಇತ್ತೀಚೆಗೆ ಸಕ್ಸಸ್ ಮೀಟ್ ಆಚರಿಸಿಕೊಂಡಿದೆ. ಈ ವೇಳೆ ಅವರು ಮಾತಿಗೆ ಸಿಕ್ಕ ಯುವ, ‘ರಾಜ್ಕುಮಾರ್ ಜನ್ಮದಿನದಂದು ನಿಮ್ಮ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋ ಟಾಕ್ ಇದೆ. ಇದು ನಿಜವೇ’ ಎಂದು ಕೇಳಲಾಯಿತು. ಇದಕ್ಕೆ ಅವರು ನೇರವಾಗಿ ಉತ್ತರಿಸಿಲ್ಲ. ‘ಮಾತುಕತೆ ನಡೆಯುತ್ತಿದೆ. ಇನ್ನು ಉಳಿದಿರೋದು ಕೆಲವೇ ದಿನಗಳು, ನೋಡೋಣ’ ಎಂದರು ಯುವ ರಾಜ್ಕುಮಾರ್.
ಪಿಆರ್ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡಬೇಕು ಎನ್ನುವ ಕನಸು ಪುನೀತ್ ಅವರದ್ದಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಯುವ ಅವರು ಹೋಂ ಬ್ಯಾನರ್ನಲ್ಲಿ ನಟಿಸುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಹೌದು ಎಂದಿದ್ದಾರೆ ಅವರು. ‘ನಾನು ಪಿಆರ್ಕೆ ಪ್ರೊಡಕ್ಷನ್ ಅಡಿಯಲ್ಲಿ ಕೆಲಸ ಮಾಡುತ್ತೇನೆ’ ಎಂದಿದ್ದಾರೆ. ವಿಶೇಷ ಎಂದರೆ ಈಗಾಗಲೇ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಯುವನಿಗಾಗಿ ಕಥೆ ಕೇಳುತ್ತಿದ್ದಾರೆ.
ರಾಜ್ಕುಮಾರ್ ಅವರ ಜನ್ಮದಿನದಂದೇ ಯುವ ಹೊಸ ಸಿನಿಮಾ ಅನೌನ್ಸ್ ಆಗಲಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.