Showing 20 of 107 posts • Page 1 of 6
ಪ್ರೀವೆಡ್ಡಿಂಗ್ ಶೂಟ್ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲಘಟ್ಟ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಮರಳುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಪರಿಣಾಮ, ತಾಯಿ ಮತ್ತು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಜಿಲ್ಲೆಯ ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಾಹಿತ ಮಹಿಳೆಯೊಬ್ಬಳು ಪತಿಯನ್ನು ತ್ಯಜಿಸಿ ಪ್ರಿಯಕರನೊಂದಿಗೆ ಪರಾರಿಯಾಗಿರುವ ಅಚ್ಚರಿಯ ಘಟನೆ ಬೆಳಕಿಗೆ ಬಂದಿದ್ದು, ಕಾರಿನೊಳಗೆ ತಾಳಿ ಕಟ್ಟಿಸಿಕೊಂಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಡೀಸೆಲ್ ಟ್ಯಾಂಕರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಭಾರೀ ದುರಂತವೊಂದು ತಪ್ಪಿದ ಘಟನೆ ನಗರದ ಎಂ.ಜಿ ರಸ್ತೆಯಲ್ಲಿ ಇಂದು ಮುಂಜಾನೆ ನಡೆದಿದೆ.
ಸಕಲೇಶಪುರ ತಾಲ್ಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ಮಾಡುತ್ತಿದ್ದ ಫೋಟೋಗ್ರಾಫರ್ಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಸಕಲೇಶಪುರ ತಾಲ್ಲೂಕು ಬೆಟ್ಟದ ಬೈರವೇಶ್ವರ ದೇಗುಲದಲ್ಲಿ ವಿಡಿಯೋ, ಫೋಟೊ ಶೂಟ್ ಮಾಡುತ್ತಿದ್ದ ಫೋಟೋಗ್ರಾಫರ್ ಗಳ ಮೇಲೆ ಸ್ಥಳೀಯರು ಎಂದು ಹೇಳಿಕೊಂಡ ಕೆಲವರು ಮತ್ತು ಗುಂಡಾಗಿರಿ ಮಾಡಿದ್ದಾರೆ.
ಆರೋಗ್ಯ ಇಲಾಖೆ ನೌಕರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ಮುಂಜಾನೆ ನಡೆದಿದೆ.
ಕಾರಿನಲ್ಲಿ ಎಂಡಿಎಂ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಐವರನ್ನು ಹಾಸನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಸರ್ಕಾರಿ ಆಸ್ತಿ ನಮ್ಮೆಲ್ಲರ ಆಸ್ತಿ ಎಂಬ ಸದಾಶಯದೊಂದಿಗೆ, ಇಲ್ಲಿನ ಸಾರಿಗೆ ಸಂಸ್ಥೆಯ ಬಸ್ಗಳಿಗೆ ಅಂಟಿಸಲಾಗಿದ್ದ ಅನಗತ್ಯ ಪೋಸ್ಟರ್ ಹಾಗೂ ಜಾಹೀರಾತು ಸ್ಟಿಕ್ಕರ್ಗಳನ್ನು ಸ್ಥಳೀಯ ಯುವಕರ ತಂಡವೊಂದು ತೆರವುಗೊಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಹಠಾತ್ ಹೃದಯಾಘಾತಕ್ಕೆ ಶಿಕ್ಷಕಿ ಸೇರಿ ಇಬ್ಬರು ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅರಕಲಗೂಡು ತಾಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ (58) ಸಾವನ್ನಪ್ಪಿದ ಶಿಕ್ಷಕಿ.
ನಗರದ ಪೆನ್ಷನ್ಮೊಹಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 79 ಪ್ರಕರಣಗಳಿರುವ ಅಂತರರಾಜ್ಯ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ.
ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ
ದೇಶದ ಬೇರೆ ರಾಜ್ಯಗಳಲ್ಲಿ ಕಾಫ್ ಸಿರಫ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ನೀಚತನ ಮೆರೆದಿದೆ. ಬೇಲೂರು ಪಟ್ಟಣದ ಹೃದಯಭಾಗದಲ್ಲಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.
ಶುಕ್ರವಾರ ರಾತ್ರಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಇದ್ದು, ಇದೀಗ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಗಣೇಶ ವಿಸರ್ಜನೆವೇಳೆ ಅವಘಡ ಸಂಭವಿಸಿದ ಘಟನೆ ಹಾಸನದಲ್ಲಿ ನಡೆದಿದೆ. ವೇಗವಾಗಿ ಲಾರಿ ಬಂದು ಮೆರವಣಿಗೆಯಲ್ಲಿ ಸಾಗುತಿದ್ದ ಜನರ ಮೇಲೆ ಹರಿದು ಸಾವು ನೋವು, ಭೀಕರ ದುರಂತ ಸಂಭವಿಸಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಸಮಾಜಸೇವೆ, ಪರಿಸರ ಸಂರಕ್ಷಣೆ ಹಾಗೂ ಮಾನವೀಯತೆಯ ಸಂಕೇತವಾಗಿರುವ ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ – ಇವರ ಹೆಸರನ್ನು ಈ ಬಾರಿ ನಾಡಹಬ್ಬ ದಸರಾ ಉದ್ಘಾಟನೆಗೆ ಘೋಷಿಸಬೇಕು ಎಂಬುದು ಮಲ್ನಾಡು ರಕ್ಷಣಾ ಸೇನೆಯ ಗಟ್ಟಿಯಾದ ಧ್ವನಿಯಾಗಿದೆ
ಶಿರಾಡಿಘಾಟ್ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಹಲವೆಡೆ ಗುಡ್ಡ ಕುಸಿಯುತ್ತಿದೆ. ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ ಎನ್ನಲಾಗುತ್ತಿದೆ.
ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಹಾಸನದ ಸಕಲೇಶಪುರ ಯಡೆಕುಮಾರಿ ಎಂಬಲ್ಲಿ ನಡೆದಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.