ಹಾಸನ: ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ  ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಕೆರೆಯಲ್ಲಿ ನಡೆದಿದೆ.

ದೀಕ್ಷಿತ್(10), ನಿತ್ಯಾಶ್ರೀ(12), ಕುಸುಮಾ(6) ಮೃತಪಟ್ಟವರು. ಹಸುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಈ ಮೂರು ಮಕ್ಕಳು ಜಾನುವಾರುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡಲು ನೀರಿನಲ್ಲಿ ಇಳಿದಿದ್ದರು. ಆಟವಾಡುತ್ತಿದ್ದಾಗ ಕೆರೆಯಲ್ಲಿ ಮೂವರು ಮುಳುಗಿ ಸಾವನ್ನಪ್ಪಿದ್ದಾರೆ

ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯರು ಕೆರೆಯಿಂದ ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.