ಹಾಸನ: ಶುಕ್ರವಾರ ರಾತ್ರಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಇದ್ದು, ಇದೀಗ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಣೇಶ ಮೆರವಣಿಗೆಯ ವೇಳೆ ಕ್ಯಾಂಟರ್ ಹರಿದು ಸುಮಾರು 9 ಜನ ಸಾವನ್ನಪ್ಪಿದ್ದರೆ, 20 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.  ಮೃತಪಟ್ಟವರ ಪೈಕಿ ಬಹುತೇಕರು ಹಾಸನ ಮೂಲದವರಾಗಿದ್ದು, ಓರ್ವ ಚಿತ್ರದುರ್ಗ ಮತ್ತೊರ್ವ ಬಳ್ಳಾರಿ ಮೂಲದವನ್ನಾಗಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿಯವರು ಪ್ರತಿಕ್ರಿಯಿಸಿದ್ದು, ಇದೊಂದು ಹೃದಯವಿದ್ರಾವಕ ಘಟನೆ ಮೃತರ ಆತ್ಮಕ್ಕೆ ಶಾಂತಿ ಕೋರಿ ಪ್ರದಾನ ಮಂತ್ರಿ ನರೇಂದ್ರ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮೃತ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.

ಇನ್ನು ಪ್ರಧಾನಿ ಮೋದಿ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ 50,000 ಘೋಷಣೆ ಮಾಡಿದ್ದಾರೆ. ಪಿಎಂ ರಾಷ್ಟೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ ಮಾಡಲಾಗಿದೆ.

ಮೃತರ ಆತ್ಮಗಳಿಗೆ ಶಾಂತಿ ದೊರಕಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದ್ದು, ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನೂ ಸರ್ಕಾರವೇ ಭರಿಸಲಿದೆ. ಹಾಗೇ ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ಸರ್ಕಾರ ಹಾಗೂ ನಾವು ಎಲ್ಲರೂ ನಿಲ್ಲುತ್ತೇವೆ ಎಂದು ಸಿಎಂ ತಿಳಿಸಿದರು.