ಹಾಸನ: ಪ್ರಕೃತಿ ವಿಕೋಪ ಭಯ ಬೀಳಿಸಿರುವ ಮಧ್ಯೆ ಕರ್ನಾಟಕದಲ್ಲೂ ಮಳೆರಾಯನ ಅಬ್ಬರ ಜೋರಾಗಿದ್ದು, ಹಾಸನದ ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದೆ.
ಸಕಲೇಶಪುರ ತಾಲೂಕಿನ ಕುಂಬರಡಿ ಸಮೀಪದಲ್ಲಿ ಸಂಭವಿಸಿದ ಭೂಕುಸಿತಕ್ಕೆ ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿದೆ. ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಈ ಭೂಕುಸಿತ ಸಂಭವಿಸಿದೆ.
ಸಕಲೇಶಪುರದ ಭೂಕುಸಿತದಲ್ಲಿ 200 ಮೀಟರ್ಗೂ ಹೆಚ್ಚು ದೂರು ರಸ್ತೆ ಕೊಚ್ಚಿ ಹೋಗಿದೆ. ಈ ರಸ್ತೆ ಕೊಚ್ಚಿ ಹೋಗಿರೋದ್ರಿಂದ ಹತ್ತಾರು ಗ್ರಾಮಗಳ ಸಂಪರ್ಕ ಬಂದ್ ಆಗಿದೆ.
ಭೂಕುಸಿತದ ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿಗಾಗಿ ಕೆಲಸ ಮಾಡಲಾಗಿತ್ತು. ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದಲೇ ಈ ಭೂಕುಸಿತ ಸಂಭವಿಸಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

