ಹಾಸನ: ಸಕಲೇಶಪುರ ತಾಲ್ಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ಮಾಡುತ್ತಿದ್ದ ಫೋಟೋಗ್ರಾಫರ್‌ಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಆದರೆ, ಆಘಾತಕಾರಿ ಸಂಗತಿಯೆಂದರೆ, ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ (FIR) ದಾಖಲಿಸಿ ಎಂದು ಒತ್ತಾಯಿಸಲು ಸಕಲೇಶಪುರ ಗ್ರಾಮಾಂತರ ಠಾಣೆಗೆ ಹೋದ ಫೋಟೋಗ್ರಾಫರ್‌ಗಳ ಮೇಲೆ, ಪೊಲೀಸರ ಎದುರೇ ಮರಗುಂದ ಗ್ರಾಮದ ಜನರು ಮತ್ತೆ ಹಲ್ಲೆ ನಡೆಸಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ನಡೆದ ಈ ಮಾರಾಮಾರಿಯಿಂದಾಗಿ ಠಾಣೆಯ ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

