Showing 20 of 107 posts • Page 3 of 6
ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ದಿಢೀರ್ ಸ್ಥಗಿತಗೊಳಿಸಲಾಗಿದೆ.
ಜಿಲ್ಲೆಯ ಚನ್ನರಾಯಪಟ್ಟಣದ ಶ್ರೀನಿವಾಸ್(43) ಆನ್ಲೈನ್ ಗೇಮ್ ಹುಚ್ಚಿಗೆ ಬಿದ್ದು ಇದ್ದ ಬದ್ದ ಆಸ್ತಿ ಮಾರಾಟ ಮಾಡಿ, ಮೈತುಂಬ ಸಾಲ ಮಾಡಿಕೊಂಡು ಕಡೆಗೆ ಸಾಲ ತೀರಿಸಲಾಗದೆ ಪತ್ನಿ ಶ್ವೇತಾ
ಇಂದು ದೇಶದೆಲ್ಲಡೆ 78ನೇ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಸನದಲ್ಲಿ 2500 ಅಡಿ ಉದ್ದ ಧ್ವಜ ಪ್ರದರ್ಶನ ಮಾಡಿರುವುದು ಗಮನಸೆಳೆಯಿತು. ಜಿಲ್ಲಾಡಳಿತ
78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದಲ್ಲಿ 2,500 ಅಡಿ ಉದ್ದದ ರಾಷ್ಟ್ರಧ್ವಜವನ್ನು ಪ್ರದರ್ಶನ ಮಾಡಲಾಯಿತು. ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಾತಂತ್ರ್ಯ ದಿನಾಚರಣೆ ಆಯೋಜನೆ ಮಾಡಲಾಗಿತ್ತು.
ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಅಸ್ವಸ್ಥರಾದ ಘಟನೆ ಹಾಸನ(Hassan) ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ನಡೆದಿದೆ. ಕೂಡಲೇ ಹದಿನೈದು
ಹಲವು ದಿನಗಳ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿದೆ.
ಅಪರಿಚಿತ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮೋಕಳಿ ಬಳಿ ನಡೆದಿದೆ. ಪಾತಕಿಗಳು ವ್ಯಕ್ತಿಯನ್ನು ಕೊಲೆಗೈದು ಕೈ-ಕಾಲು ಕಟ್ಟಿ ಮೃತದೇಹವನ್ನು ಕೆರೆಗೆ ಎಸೆದಿದ್ದಾರೆ.
ಭಾರೀ ಮಳೆಗೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದ ಪರಿಣಾಮ ಶಿರಾಡಿ ಘಾಟ್ ಮತ್ತೆ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದೆ.
ಗುಡ್ಡ ಕುಸಿತದಿಂದ ಬಂದ್ ಆಗಿದ್ದ ಹಾಸನದ ಶಿರಾಡಿಘಾಟ್ನಲ್ಲಿ ಸಂಚಾರ ಆರಂಭವಾಗಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಗುಡ್ಡ ಕುಸಿದಿತ್ತು
ಪ್ರಕೃತಿ ವಿಕೋಪ ಭಯ ಬೀಳಿಸಿರುವ ಮಧ್ಯೆ ಕರ್ನಾಟಕದಲ್ಲೂ ಮಳೆರಾಯನ ಅಬ್ಬರ ಜೋರಾಗಿದ್ದು, ಹಾಸನದ ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದೆ.
ಕೇರಳದ ವಯನಾಡಿನಲ್ಲಿ ಬೃಹತ್ ಭೂಕುಸಿತ ಸಂಭವಿಸಿ 70ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ ಘಟನೆಯ ಬೆನ್ನಿನಲ್ಲಿಯೇ, ಹಾಸನದ ಶಿರಾಡಿ ಘಾಟಿಯಲ್ಲಿಯೂ ರಸ್ತೆಯ ಮೇಲೆ ಭಾರೀ ಭೂಕುಸಿತ ಸಂಭವಿಸಿದೆ.
ಭಾರೀ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ.
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಶಿರಾಡಿ ಘಾಟಿಯ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತಗೊಂಡಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ.
ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಯಡಕುಮೇರಿ ನಡುವಿನ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ.
ಹಾಸನ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಆರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿಡಿಪಿಐ ಹೆಚ್.ಕೆ.ಪಾಂಡು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಹಣ ತೊಡಗಿಸಿ ಆನ್ಲೈನ್ನಲ್ಲಿ ಆಡುವಂಥ ರಮ್ಮಿ ಆಟ ನಿಷೇಧ ಮಾಡುವ ಬಗ್ಗೆ ಉಪ ತಹಶೀಲ್ದಾರ್ ಮುಖಾಂತರ ರಾಜ್ಯ ಸರ್ಕಾರಕ್ಕೆ ವರುಣ್ ಚಕ್ರವರ್ತಿ ಹಾಸನ ಮನವಿ ಮಾಡಿದರು.
2 ದಿನಗಳಿಂದ ಮಳೆ ಬಿಡುವು ಕೊಟ್ಟಿರುವುದರಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರ ಪುನರಾರಂಭವಾಗಿದೆ.
ಶಿರಾಡಿ ಘಾಟ್ ರಸ್ತೆಯಲ್ಲಿ ಏಕಾಏಕಿ ಮಣ್ಣು ಗುಡ್ಡ ಕುಸಿದಿದೆ. ಪರಿಣಾಮ ಮಾರುತಿ ಸುಜುಕಿ ಕಂಪನಿಯ ಓಮಿನಿ ಕಾರು ಮಣ್ಣಿನಲ್ಲಿ ಸಿಲುಕಿಕೊಂಡಿದೆ.
ದೇವಸ್ಥಾನಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು ಕೊಲ್ಲಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬುಧವಾರ ಮತ್ತೆ ಭೂ ಕುಸಿತ ಸಂಭವಿಸಿದೆ. ಭಾರೀ ಮಳೆಯಿಂದ ಕೊಲ್ಲಹಳ್ಳಿ ಬಳಿ ತಡೆಗೋಡೆ ಕುಸಿತವಾಗಿದೆ.