ಹಾವೇರಿ: ಮೊಬೈಲ್ ರಿಪೇರಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಹಾವೇರಿ ನಗರದ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.

ಇಲ್ಲಿನ ಬಸ್ ನಿಲ್ದಾಣದ ಬಳಿ ಸ್ವಾತಿ ಹೊಟೇಲ್ ಪಕ್ಕದಲ್ಲಿರುವ ರಫೀಕ್ ಬೋರ್ಗಲ್ ಮತ್ತು ಸಾಹಿಲ್ ಮಾಣಿಕ ಎಂಬವರ ಮಾಲಕತ್ವದ A2 ಝೆಡ್ ಮೊಬೈಲ್ ಸರ್ಮಿಸ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದರು. ಬೆಂಕಿಯಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.