Showing 20 of 46 posts • Page 2 of 3
ಹಳೆಯ ಬ್ಯಾಲೆಟ್ ಬಾಕ್ಸ್ಗಳನ್ನು ಕಳ್ಳತನ ಮಾಡಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಆರ್ಥಿಕ ನೆರವನ್ನು ಮಂಗಳವಾರ ಜಿಲ್ಲೆಯ ಹಲವಾರು ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗಿದೆ.
ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಆಸ್ತಿ ದಾಖಲೆಗಾಗಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು 32 ಜನರನ್ನು ವಶಕ್ಕೆ ಪಡೆದಿದ್ದಾರೆ.
ಶಿಗ್ಗಾವಿ ಕ್ಷೇತ್ರದ ಟಿಕೆಟ್ ಅನ್ನು ಮುಸ್ಲಿಂ ಅಭ್ಯರ್ಥಿಗೆ ಮೀಸಲಿಡುವಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕಾಂಗ್ರೆಸ್ ನಾಯಕರನ್ನು ಒತ್ತಾಯಿಸಿದ್ದಾರೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದ ನಂತರ ಉದ್ವಿಗ್ನತೆ ಹೆಚ್ಚಾಗಿದೆ.
ನಗರದ ಹಳೆ ಪಿಬಿ ರಸ್ತೆಯಲ್ಲಿ ರಸ್ತೆ ಬದಿಯ ಚರಂಡಿಯಲ್ಲಿ 9 ವರ್ಷದ ಬಾಲಕ ನಿವೇದನ್ ಗುಡಗೇರಿ ಮುಳುಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀ ಕ್ಷೇತ್ರ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ದಸರಾ ಹಬ್ಬದ ಪ್ರಯುಕ್ತ ನಡೆಯುವ ಕಾರ್ಣಿಕೋತ್ಸವದಲ್ಲಿ ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ
ಭೀಕರ ಮಳೆಗೆ ಆಟೋವೊಂದು ಕೊಚ್ಚಿ ಹೋಗಿರುವ ಘಟನೆ ಹಾವೇರಿ ನಗರದ ನಾಗೇಂದ್ರನಮಟ್ಟಿ ಬಳಿ ಇರುವ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. ನೀರಿನಲ್ಲಿ ಕೊಚ್ಚಿ ಹೋಗಿರುವ ಆಟೋವನ್ನು ತೆಗೆಯದೆ ಇದ್ದಿದ್ದಕ್ಕೆ ಅಧಿಕಾರಿಗಳ ವಿರುದ್ಧ ಆಟೋ ಚಾಲಕ ಆಕ್ರೋಶ ಹೊರಹಾಕಿದ್ದಾನೆ.
ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 48ರ ಬ್ರಿಡ್ಜ್ ಬಳಿ ನಡೆದಿದೆ.
ದರ್ಶನ್ ತಪ್ಪು ಮಾಡಿದ್ದಕ್ಕೆ ಜೈಲಿಗೆ ಹೋಗಿದ್ದಾರೆ. ಸುಮ್ಮನೇ ಯಾರಾದರೂ ಜೈಲಿಗೆ ಹೋಗ್ತಾರಾ ಎಂದು ಸಚಿವ ಜಮೀರ್ ಅಹ್ಮದ್ ಪ್ರಶ್ನೆ ಮಾಡಿದ್ದಾರೆ.
ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯ 10 ಕಂತುಗಳ ಹಣ ಕೂಡಿಸಿ ಸೊಸೆಗೆ ಜನರಲ್ ಸ್ಟೋರ್ ಮತ್ತು ಬಳೆ ಅಂಗಡಿ ಹಾಕಿಕೊಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನಲ್ಲಿ ನಡೆದಿದೆ.
ಬೇರೆ ಧರ್ಮಗಳು ಉತ್ಪತ್ತಿ ಆಗುವ ಮುನ್ನ ಇದ್ದದ್ದೇ ಹಿಂದೂ ಧರ್ಮ. ಈ ದೇಶದಲ್ಲಿ ಇರುವ ಮುಸ್ಲಿಮರೂ ಹಿಂದೂಗಳೇ. ಅಖಂಡ ಭಾರತ ಇದು ಎಂದು ಹರಿಹರಿ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.
ನಗರದ ಹಳೆಯ ಕಟ್ಟಡ ತೆರವು ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡು ನರಳಾಡುತ್ತಿದ್ದ ನಾಗರಹಾವಿಗೆ ಇಲ್ಲಿನ ಪಾಲಿಕ್ಲಿನಿಕ್ನ ಪಶುವೈದ್ಯ ಡಾ.ಸಣ್ಣಭೀರಪ್ಪ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ನಿರಂತರ ಮಳೆಯಿಂದಾಗಿ ಮನೆ ಕುಸಿದು ಅವಳಿ ಮಕ್ಕಳು ಹಾಗೂ ಮಹಿಳೆ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸವಣೂರಿನ ಮಾದಾಪುರದಲ್ಲಿ ನಡೆದಿದೆ.
ಅಮ್ಮ ಬೈಕ್ ಕೊಡಿಸು. ನನಗೆ ಬೈಕ್ ಬೇಕೇ ಬೇಕು ಅಂತಿದ್ದ ಮಗ ಬೈಕ್ ಕೊಡಿಸದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಕರೂರು ಗ್ರಾಮದಲ್ಲಿ ಈ ದುರಂತ ನಡೆದಿದೆ.
ಈಗಿನ ಯುವಕರಲ್ಲಿ ಓವರ್ ಟೇಕ್ ಮಾಡುವುದು ದೊಡ್ಡ ಹುಚ್ಚಾಗಿ ಬಿಟ್ಟಿದೆ. ಎಷ್ಟೊ ಮಂದಿ ಜೀವವನ್ನು ಕಳೆದುಕೊಂಡಿದ್ದಾರೆ. ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸ್ವಿಪ್ಟ್ ಕಾರೊಂದು ಭಯಾನಕವಾಗಿ
ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಇಲಿ ಜ್ವರಕ್ಕೆ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದ ಉಮೇಶ್(72) ಎಂಬ ವೃದ್ಧ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣ ಹೆಚ್ಚುತ್ತಿರುವ ಮಧ್ಯೆಯೇ ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ.ಹಾವೇರಿಯ ಗ್ರಾಮವೊಂದರ 12 ವರ್ಷದ ಬಾಲಕನಿಗೆ ಇಲಿ ಜ್ವರ ಕಾಣಿಸಿಕೊಂಡಿದ್ದು,
ಡೆಂಗ್ಯೂ ಜ್ವರಕ್ಕೆ 9 ವರ್ಷದ ಮಗು ಬಲಿಯಾಗಿರುವ ಘಟನೆ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದೆ. ದ್ಯಾಮಪ್ಪ ಬನ್ನಿಹಟ್ಟಿ ಎಂಬುವವರ ಪುತ್ರಿ ದಿವ್ಯ ದ್ಯಾಮಪ್ಪ ಮೃತ ಮಗು.