Bengaluru 22°C
Ad

ಡೆಂಗ್ಯೂ, ಕೀಟವಾಹಕ ರೋಗ ತಡೆಗೆ ಎಚ್ಚರ ವಹಿಸಿ: ಆರೋಗ್ಯ ಇಲಾಖೆ

ಸೊಳ್ಳೆ ಉತ್ಪತ್ತಿ ತಾಣಗಳು, ಸೊಳ್ಳೆ ನಿಯಂತ್ರಣ ಕ್ರಮಗಳು, ಡೆಂಗ್ಯೂ ರೋಗ ಹಾಗೂ ಕೀಟವಾಹಕ ರೋಗ  ನಿಯಂತ್ರಣ ಮತ್ತು ವೈಯಕ್ತಿಕ ರಕ್ಷಣಾ ಮುಂಜಾಗ್ರತಾ ಮತ್ತು ನಿಯಂತ್ರಣ ಕ್ರಮಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದೆ.

ಮೈಸೂರು: ಸೊಳ್ಳೆ ಉತ್ಪತ್ತಿ ತಾಣಗಳು, ಸೊಳ್ಳೆ ನಿಯಂತ್ರಣ ಕ್ರಮಗಳು, ಡೆಂಗ್ಯೂ ರೋಗ ಹಾಗೂ ಕೀಟವಾಹಕ ರೋಗ  ನಿಯಂತ್ರಣ ಮತ್ತು ವೈಯಕ್ತಿಕ ರಕ್ಷಣಾ ಮುಂಜಾಗ್ರತಾ ಮತ್ತು ನಿಯಂತ್ರಣ ಕ್ರಮಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದೆ.

ಎಲ್ಲಾ ನೀರಿನ ತೊಟ್ಟಿಗಳು, ಡ್ರಮ್‌ಗಳು, ಬ್ಯಾರೆಲ್‌ಗಳು, ಏರ್‌ಕೂಲರ್, ತೊಟ್ಟಿ ಇತ್ಯಾದಿಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಉಜ್ಜಿ ತೊಳೆದು, ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳಬೇಕು. ನೀರನ್ನು ಖಾಲಿ ಮಾಡಲು ಸಾಧ್ಯವಿಲ್ಲದ ತೊಟ್ಟಿ, ಡ್ರಮ್  ಮುಂತಾದವುಗಳನ್ನು ಸೊಳ್ಳೆಗಳು ಒಳಗೆ ನುಸಳದಂತೆ ಮುಚ್ಚಳದಿಂದ ಮುಚ್ಚಬೇಕು. ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳನೀರು ಚಿಪ್ಪು, ಮರದ ಪೊಟರೆಗಳಲ್ಲಿ, ಹೂವಿನ ಕುಂಡಗಳಲ್ಲಿ, ಒಡೆದ ಬಾಟಲಿ, ಕುಡಿದು ಬಿಸಾಡಿದ ಪ್ಲಾಸ್ಟಿಕ್ ಲೋಟ, ಬಾಟಲ್ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು ಮತ್ತು ಸೂಕ್ತ ವಿಲೇವಾರಿ ಮಾಡಬೇಕು.

ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಔಷಧ ಲೇಪಿತ ಸೊಳ್ಳೆ ಪರದೆಗಳನ್ನು ಬಳಸಬೇಕು.  ಮೈತುಂಬಾ ಬಟ್ಟೆ ಧರಿಸಬೇಕು. ಸೊಳ್ಳೆಗಳ ಕಚ್ಚುವಿಕೆಯಿಂದ ರಕ್ಷಣೆ ಪಡೆಯಬೇಕು. ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡ ಸೊಳ್ಳೆ ನಿಯಂತ್ರಣ ಕ್ರಮಗಳಿಗೆ ಸಹಕಾರ ನೀಡುವಂತೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad