ವಿಟಮಿನ್ ಸಿ ಹಾಗೂ ಆಂಟಿಆಕ್ಸಿಡಂಟ್ ಗುಣಗಳು ಮತ್ತು ಅಗತ್ಯ ಪೋಷಕಾಂಶಗಳನ್ನು ಹೊಂದಿರುವ ನೆಲ್ಲಿಕಾಯಿಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ, ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುವ ಸಾಮರ್ಥ್ಯ ಕೂಡ ನೆಲ್ಲಿಕಾಯಿಗೆ ಇರುತ್ತದೆ. ನಮ್ಮ ದೇಹದ ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ . ಆದರೆ ನೆಲ್ಲಿಕಾಯಿಯಿಂದ ಹೆಚ್ಚಿನ ಆರೋಗ್ಯ ಪ್ರಯೋಜನವನ್ನು ಪಡೆದುಕೊಳ್ಳಲು ನಾವು ನೆಲ್ಲಿಕಾಯಿಯನ್ನು ಖಾಲಿ ಹೊಟ್ಟೆಯಲ್ಲಿಯೇ ಸೇವನೆ ಮಾಡಬೇಕು.
ನೆಲ್ಲಿಕಾಯಿಯ ಸಂಪೂರ್ಣ ಆರೋಗ್ಯ ಲಾಭವನ್ನು ಪಡೆದುಕೊಳ್ಳಲು ನಾವು ಖಾಲಿ ಹೊಟ್ಟೆಯಲ್ಲಿಯೇ ಅದನ್ನು ಸೇವನೆ ಮಾಡಬೇಕು. ಆದರೆ ನೆಲ್ಲಿಕಾಯಿಯು ಎಲ್ಲಾ ಕಾಲದಲ್ಲಿಯೂ ಲಭ್ಯ ಇರುವುದಿಲ್ಲ. ಇಂಥಾ ಸಂದರ್ಭದಲ್ಲಿ ನೀವು ನೆಲ್ಲಿಕಾಯಿಯನ್ನು ಕತ್ತರಿಸಿ ಹೋಳು ಮಾಡಿ ಬಳಿಕ ಅದನ್ನು ಬಿಸಿಲಿನಲ್ಲಿ ಒಣಗಿಸಿ ಪುಡಿ ಮಾಡಿ ಇಟ್ಟುಕೊಳ್ಳುವ ಮೂಲಕ ನೀವು ನಿತ್ಯವೂ ನೆಲ್ಲಿಕಾಯಿಯನ್ನು ಸೇವನೆ ಮಾಡಬಹುದು. ಇದೇ ಪುಡಿಯಿಂದ ನೀವು ನೆಲ್ಲಿಕಾಯಿಯ ಜ್ಯೂಸ್ ತಯಾರಿಸಿ ಕೂಡ ಕುಡಿಯಬಹುದು.