Bengaluru 22°C

ಆಮ್ಲಾ ರಸ ಸೇವಿಸುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ನಿವಾರಣೆ

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಆಮ್ಲಾ ರಸ ಸೇವಿಸುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಆಮ್ಲಾ ರಸ ಸೇವಿಸುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತದೆ. ಕೂದಲು ಹಾಗೂ ಚರ್ಮದ ಆರೋಗ್ಯಕ್ಕೆ ಕೂಡಾ ಇದು ಒಳ್ಳೆಯದು. ಆಮ್ಲಾದಲ್ಲಿ ಅನೇಕ ಪೋಷಕಾಂಶಗಳಿವೆ. ಇದರಲ್ಲಿ ಕಿತ್ತಳೆಗಿಂತ ಹೆಚ್ಚು ವಿಟಮಿನ್‌ ಸಿ ಅಂಶವನ್ನು ಹೊಂದಿದೆ. ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್‌ಗಳಲ್ಲಿ ಸಮೃದ್ಧವಾಗಿದೆ. ಆಮ್ಲಾ ಸೇವನೆಯಿಂದ ಬಹುತೇಕ ಆರೋಗ್ಯ ಸಮಸ್ಯೆಗಳು ದೂರಾಗುತ್ತದೆ.


ಇದು ಮೆದುಳಿನ ಶಕ್ತಿ ಮತ್ತು ಜ್ಞಾಪಕ ಶಕ್ತಿ ಹೆಚ್ಚಿಸಲು, ತೂಕ ಇಳಿಸಲು ಸಹಾಯಕಾರಿಯಾಗಿದೆ. ಖಾಲಿ ಹೊಟ್ಟೆಯಲ್ಲಿ ಆಮ್ಲಾ ಜ್ಯೂಸ್‌ ಸೇವಿಸುವುದರಿಂದ ಇನ್ನಷ್ಟು ಆರೋಗ್ಯ ಪ್ರಯೋಜನಗಳಿವೆ. ಉರಿಯೂತದ ಸಮಸ್ಯೆ ಇರುವವರು ಖಾಲಿ ಹೊಟೆಯಲ್ಲಿ ಆಮ್ಲಾ ಜ್ಯೂಸ್‌ ಸೇವಿಸಿದರೆ ಉರಿಯೂತದ ಲಕ್ಷಣಗಳನ್ನು ಕಡಿಮೆ ಮಾಡಬಹುದು. ಇದು ಉರಿಯೂತ ಮತ್ತು ನೋವನ್ನೂ ಕಡಿಮೆ ಮಾಡುತ್ತದೆ.


ಆಮ್ಲಾ ರಸವನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ನಾವು ಸೇವಿಸುವ ಆಹಾರದಿಂದ ದೇಹವು ಪೋಷಕಾಂಶಗಳನ್ನು ಉತ್ತಮವಾಗಿ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಆಮ್ಲಾ ರಸದ ಸೇವನೆಯಿಂದ ಚಯಾಪಚಯ ಕ್ರಿಯೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ. ಇದರಿಂದ ತೂಕ ನಿಯಂತ್ರಣದಲ್ಲಿರುತ್ತದೆ. ಒಟ್ಟಾರೆ ತೂಕವನ್ನು ನಿಯಂತ್ರಿಸಲು ಮತ್ತು ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.


ಆಮ್ಲಾ ಜ್ಯೂಸ್ ಕುಡಿಯುವುದರಿಂದ ದೇಹದಲ್ಲಿನ ಸಕ್ಕರೆ ನಿಯಂತ್ರಣದಲ್ಲಿರುತ್ತದೆ. ಅಂದರೆ ಮಧುಮೇಹವನ್ನು ನಿಯಂತ್ರಿಸಬಹುದು. ಆದ್ದರಿಂದ ಮಧುಮೇಹಿಗಳು ಒಮ್ಮೆ ವೈದ್ಯರನ್ನು ಸಂಪರ್ಕಿಸಿ ಪ್ರತಿದಿನ ಇಂತಿಷ್ಟು ಆಮ್ಲಾ ರಸ ಸೇವಿಸುವುದನ್ನು ಅಭ್ಯಾಸ ಮಾಡಿಕೊಳ್ಳಿ. ಆಮ್ಲಾ ಜ್ಯೂಸ್‌ ಸೇವನೆಯಿಂದ ಕೊಲೆಸ್ಟ್ರಾಲ್‌ ಮಟ್ಟ ಕಡಿಮೆ ಆಗುತ್ತದೆ. ಹೆಚ್ಚಿದ ಕೊಲೆಸ್ಟ್ರಾಲ್ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಆದರೆ ಆಮ್ಲಾ ಜ್ಯೂಸ್ ಕೊಲೆಸ್ಟ್ರಾಲ್ ನಿಯಂತ್ರಿಸಿ ಬಹುತೇಕ ಹೃದಯ ಸಂಬಂಧಿ ಸಮಸ್ಯೆಗಳಿಂದ ನಮ್ಮನ್ನು ರಕ್ಷಿಸುತ್ತದೆ.


ಆಮ್ಲಾ ಜ್ಯೂಸ್, ದೇಹವನ್ನು ನಿರ್ವಿಷಗೊಳಿಸುತ್ತದೆ. ಆಮ್ಲಾ ರಸವು ದೇಹದಿಂದ ಕಲ್ಮಶಗಳನ್ನು ತೆಗೆದುಹಾಕುತ್ತದೆ ಮತ್ತು ರಕ್ತವನ್ನು ಶುದ್ಧೀಕರಿಸಿ ವಿವಿಧ ಆರೋಗ್ಯ ಸಮಸ್ಯೆಗಳಿಂದ ಕಾಪಾಡುತ್ತದೆ. ಚರ್ಮ ಹಾಗೂ ಕೂದಲಿನ ಆರೋಗ್ಯಕ್ಕೆ ಕೂಡಾ ಆಮ್ಲಾ ಜ್ಯೂಸ್‌ ಬಹಳ ಸಹಕಾರಿ. ಇದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಕೂದಲು ದಟ್ಟವಾಗಿ, ಕಪ್ಪಾಗಿ ಬೆಳೆಯುತ್ತದೆ. ಚರ್ಮ ಕೂಡಾ ಕಲೆಮುಕ್ತವಾಗಿ ಹೊಳೆಯುತ್ತದೆ.


ಪ್ರತಿದಿನ ಆಮ್ಲಾ ಜ್ಯೂಸ್‌ ರಕ್ತದಲ್ಲಿ ಕೆಂಪು ರಕ್ತಕಣಗಳು ಹೆಚ್ಚಾಗುತ್ತವೆ. ಮೂಳೆಗಳು ಸಹ ಬಲಗೊಳ್ಳುತ್ತವೆ. ಮಧುಮೇಹ ಇರುವವರಿಗೆ ಆಮ್ಲಾ ತುಂಬಾ ಒಳ್ಳೆಯದು. ಗ್ಯಾಸ್ ಸಮಸ್ಯೆಯಿಂದ ಬಳಲುತ್ತಿರುವರು ಇದನ್ನು ಸೇವಿಸಿದರೆ ಒಳ್ಳೆಯದು. ಇದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನೆಗಡಿ ಮತ್ತು ಕೆಮ್ಮಿನಂತಹ ಸಾಮಾನ್ಯ ಸಮಸ್ಯೆಗಳೂ ಕಡಿಮೆಯಾಗುತ್ತವೆ.


Nk Channel Final 21 09 2023