ಕ್ಯಾರೆಟ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲೂ ಕಣ್ಣಿನ ಆರೋಗ್ಯಕ್ಕೆ ಕ್ಯಾರೆಟ್ ತುಂಬಾನೇ ಒಳ್ಳೆಯದು, ನಿಯಮಿತವಾಗಿ ಕ್ಯಾರೆಟ್ ಹಾಗೂ ಅದರ ಜ್ಯೂಸ್ ಸೇವನೆ ಮಾಡುವುದರಿಂದ ಕಣ್ಣಿಗೆ ಸಂಬಂಧಪಟ್ಟ ಸಮಸ್ಯೆಗಳು ದೂರವಾಗುವುದರ ಜೊತೆಗೆ ಕಣ್ಣಿನ ಆರೋಗ್ಯವೂ ವೃದ್ಧಿಸುತ್ತದೆ.
ಕ್ಯಾರೆಟ್‌ನಲ್ಲಿ ವಿಟಮಿನ್ ಎ ಮತ್ತು ಉತ್ಕರ್ಷಣ ನಿರೋಧಕಗಳು ಹೇರಳವಾಗಿದ್ದು, ಇದು ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಕ್ಯಾರೆಟ್ ಒಂದು ಪೌಷ್ಟಿಕಾಂಶಗಳಿಂದ ಹೇರಳವಾಗಿರುವ ತರಕಾರಿಯಾಗಿದ್ದು, ಇದು ಕಣ್ಣುಗಳಿಗೆ ಸೇರಿದಂತೆ ಒಟ್ಟಾರೆ ಆರೋಗ್ಯಕ್ಕೆ ಒಳ್ಳೆಯದು.

