Bengaluru 19°C

ದಾಳಿಂಬೆ ಹಣ್ಣಿನಲ್ಲಿ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

ನಮ್ಮ ಸುತ್ತಲೂ ಸಾಮಾನ್ಯವಾಗಿ ಸಿಗುವ ದಾಳಿಂಬೆ ಹಣ್ಣು ತನ್ನಲ್ಲಿ ಹಲವಾರು ಆರೋಗ್ಯದಾಯಕ ಅಂಶಗಳನ್ನು ಹೊಂದಿದೆ. ದಾಳಿಂಬೆ ಹಣ್ಣು ಆ್ಯಂಟಿ ಆಕ್ಸಿಡೆಂಟ್, ಆ್ಯಂಟಿ ವೈರಲ್ ಮತ್ತು ಆ್ಯಂಟಿ ಟ್ಯೂಮರ್ ಗುಣಲಕ್ಷಣಗಳನ್ನು ಹೊಂದಿದೆ.

ನಮ್ಮ ಸುತ್ತಲೂ ಸಾಮಾನ್ಯವಾಗಿ ಸಿಗುವ ದಾಳಿಂಬೆ ಹಣ್ಣು ತನ್ನಲ್ಲಿ ಹಲವಾರು ಆರೋಗ್ಯದಾಯಕ ಅಂಶಗಳನ್ನು ಹೊಂದಿದೆ. ದಾಳಿಂಬೆ ಹಣ್ಣು ಆ್ಯಂಟಿ ಆಕ್ಸಿಡೆಂಟ್, ಆ್ಯಂಟಿ ವೈರಲ್ ಮತ್ತು ಆ್ಯಂಟಿ ಟ್ಯೂಮರ್ ಗುಣಲಕ್ಷಣಗಳನ್ನು ಹೊಂದಿದೆ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ ಮತ್ತು ವಿಟಮಿನ್ ಇ ಮತ್ತು ಫೋಲಿಕ್ ಆಮ್ಲ ಕೂಡ ಇದೆ. ಪ್ರತಿನಿತ್ಯ ದಾಳಿಂಬೆಯನ್ನು ತಿನ್ನುವುದು ಅಥವಾ ಜ್ಯೂಸ್ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಕೂಡ ವೃದ್ಧಿಯಾಗಲಿದೆ.


ದಾಳಿಂಬೆ ಹಣ್ಣಿನಲ್ಲಿ ಆ್ಯಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಇರುವ ಕಾರಣ ಹೃದಯಕ್ಕೆ ಮಾರಕ ಎನಿಸುವ ಸಾಕಷ್ಟು ಆರೋಗ್ಯ ಸಮಸ್ಯೆಗಳಿಗೆ ಉತ್ತಮ ಪರಿಹಾರ ಕಾರ್ಯನಿರ್ವಹಿಸುತ್ತದೆ ಮತ್ತು ಇದು ದೇಹದಲ್ಲಿ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುತ್ತದೆ.


ದಾಳಿಂಬೆ ಬೀಜಗಳಿಂದ ಎಣ್ಣೆಯನ್ನೂ ತೆಗೆಯಬಹುದು. ಇದರಲ್ಲಿ ಪ್ಯೂನಿಕ್ ಆಮ್ಲದಲ್ಲಿ ಸಮೃದ್ಧವಾಗಿರುತ್ತದೆ. ಇದು ಇತರೆ ಹಣ್ಣುಗಳಲ್ಲಿ ಇರುವುದಿಲ್ಲ. ಈ ಎಣ್ಣೆಯಲ್ಲಿ ಈಸ್ಟ್ರೊಜೆನ್ ಅಧಿಕವಾಗಿರಲಿದ್ದು, ಈಸ್ಟ್ರೊಜೆನ್ ಮಟ್ಟ ಕಡಿಮೆ ಇರುವ ಋತುಬಂಧಕ್ಕೊಳಗಾದ ಮಹಿಳೆಯರಿಗೆ ನೀಡಬಹುದು. ಈ ಬೀಜಗಳು UV ಮತ್ತು AV ಕಿರಣಗಳಿಂದ ನಮ್ಮನ್ನು ರಕ್ಷಿಸುತ್ತದೆ ಎಂಬುದನ್ನು ಅಧ್ಯಯನಗಳು ಸಾಬೀತುಪಡಿಸುತ್ತವೆ, ಆದ್ದರಿಂದ ಇದು ಚರ್ಮದ ಕ್ಯಾನ್ಸರ್’ನ್ನು ತಡೆಗಟ್ಟಲಿದೆ.


ಈ ಬೀಜಗಳು ಮನೋಭಾವ ಹಾಗೂ ರಕ್ತಪರಿಚಲನೆಯ ಮೇಲೆ ನೇರವಾದ ಪ್ರಭಾವ ಬೀರುತ್ತದೆ. ವಿಶೇಷವಾಗಿ ಇವುಗಳ ಸೇವನೆಯಿಂದ ಜನನಾಂಗಗಳಲ್ಲಿ ರಕ್ತಪರಿಚಲನೆ ಹೆಚ್ಚುವ ಮೂಲಕ ನಿಮಿರು ದೌರ್ಬಲ್ಯ ಕಡಿಮೆಯಾಗುತ್ತದೆ. ಅಲ್ಲದೇ ಪುರುಷರಲ್ಲಿ ಟೆಸ್ಟ್ರೋಸ್ಟೆರಾನ್ ರಸದೂತದ ಮಟ್ಟವನ್ನು ಏರಿಸುವ ಮೂಲಕ ಕಾಮೋತ್ಸಾಹವನ್ನೂ ಹೆಚ್ಚಿಸುತ್ತದೆ.


ದಾಳಿಂಬೆ ಬೀಜಗಳನ್ನು ನಿಯಮಿತವಾಗಿ ಸೇವಿಸುತ್ತಾ ಬರುವ ಮೂಲಕ ದೇಹದಲ್ಲಿ ಎದುರಾಗುವ ಉರಿಯೂತ ಮತ್ತು ಇತರ ಸಂಬಂಧಿತ ತೊಂದರೆಗಳಿಂದ ರಕ್ಷಣೆ ಒದಗುತ್ತದೆ. ಈ ಬಗ್ಗೆ ನಡೆದ ಅಧ್ಯಯನಗಳ ಮೂಲಕ ಫ್ರೀ ರ್ಯಾಡಿಕಲ್ ಎಂಬ ಕಣಗಳ ಉತ್ಕರ್ಷಣಶೀಲ ಘರ್ಷಣೆಯನ್ನು ತಡೆಯುವ ಕ್ಷಮತೆಯನ್ನು ದಾಳಿಂಬೆ ಬೀಜಗಳು ಹೊಂದಿವೆ.


ನಿಯಮಿತವಾಗಿ ದಾಳಿಂಬೆ ಬೀಜಗಳನ್ನು ಸೇವಿಸುವ ಮೂಲಕ ಒಸಡುಗಳು ದೃಢಗೊಳ್ಳುತ್ತವೆ ಹಾಗೂ ಸಡಿಲವಾದ ಹಲ್ಲುಗಳು ಗಟ್ಟಿಯಾಗುತ್ತವೆ. ಅಲ್ಲದೇ ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ಈ ಬೀಜಗಳಲ್ಲಿರುವ ಬ್ಯಾಕ್ಟೀರಿಯಾ ನಿವಾರಕ ಗುಣ ನೆರವಾಗುತ್ತದೆ.


ತೂಕ ಇಳಿಸುವ ಪ್ರಯತ್ನಲ್ಲಿದ್ದವರಿಗೆ ದಾಳಿಂಬೆ ಬೀಜಗಳು ವರದಾನವಾಗಿವೆ. ಇವುಗಳಲ್ಲಿರುವ ಕರಗದ ನಾರು ಹೆಚ್ಚಿನ ಹೊತ್ತು ಹೊಟ್ಟೆ ತುಂಬಿರುವ ಭಾವನೆ ಮೂಡಿಸಿ ಅನಗತ್ಯ ಆಹಾರ ಸೇವನೆಯಿಂದ ತಡೆಯುತ್ತದೆ. ಅಲ್ಲದೇ ಇವುಗಳನ್ನು ಜೀರ್ಣಿಸಿಕೊಳ್ಳಲು ಹೆಚ್ಚಿನ ಕೊಬ್ಬನ್ನು ಬಳಸುವ ಮೂಲಕ ಸ್ಥೂಲಕಾಯದಿಂದ ಬಿಡುಗಡೆ ನೀಡುತ್ತದೆ.


ದಾಳಿಂಬೆಯಲ್ಲಿ ಕಬ್ಬಿಣದ ಅಂಶವು ಸಮೃದ್ಧವಾಗಿದೆ. ಇದು ಕಬ್ಬಿಣದ ಕೊರತೆಯನ್ನು ತಡೆಯಲು ಗರ್ಭಿಣಿಯರಿಗೆ ಸಹಾಯ ಮಾಡುತ್ತದೆ. ಮುಖದಲ್ಲಿ ಸುಕ್ಕುಗಳಾಗಿದ್ದರೆ ಅಥವಾ ಮುಖದ ಚರ್ಮ ಒಣಗಿರುವ ಅನುಭವವಾದಾಗ ದಾಳಿಂಬೆ ಹಣ್ಣಿನ ಸಿಪ್ಪೆಯನ್ನು ಒಣಗಿಸಿ ಪುಡಿಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಹಾಲು ಬೆರಸಿ ಪೇಸ್ಟ್ ಮಾಡಿಕೊಂಡು ಮುಖಕ್ಕೆ ಹಚ್ಚಿ. ಒಂದು ವೇಳೆ ನಿಮ್ಮದು ಎಣ್ಣೆಯುಕ್ತ ಚರ್ಮವಾಗಿದ್ದರೆ ರೋಸ್ ವಾಟರ್ ಅನ್ನು ಬಳಸಬಹುದಾಗಿದೆ.


Nk Channel Final 21 09 2023