ಮೂಲಂಗಿ ಆರೋಗ್ಯಕ್ಕೆ ಬಹಳ ಒಳ್ಳೆಯದು.  ನಿಮ್ಮ ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ನಿಮ್ಮ ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ. ವಿಟಮಿನ್ ಸಿ, ವಿಟಮಿನ್ ಬಿ ಮೆಗ್ನಿಸಿಯಮ್, ರಂಜಕ, ಕಬ್ಬಿಣ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಮೂಲಂಗಿಯ ಜ್ಯೂಸ್ ಅನ್ನು ಬೆಳಿಗ್ಗೆ ಖಾಲಿ ಹೊಟ್ಟೆಗೆ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ಇವೆ.

ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ತೂಕವನ್ನು ನಿಯಂತ್ರಿಸುತ್ತದೆ. ಅಲ್ಲದೇ ಮೂಲಂಗಿಯನ್ನು ತಿನ್ನುವುದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಚಯಾಪಚಯವನ್ನು ಸುಧಾರಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ತಿಂದರೆ ಪೈಲ್ಸ್ ಸಮಸ್ಯೆಯನ್ನು ಮೂಲಂಗಿಯು ಕಡಿಮೆ ಮಾಡಬಹುದು.

ರಾಬಿನಿನ್ ಮತ್ತು ಗ್ಲುಕೋಸಿಲಿನೇಟ್‌ಗಳಂತಹ ಚಯಾಪಚಯ-ಉತ್ತೇಜಿಸುವ ಸಂಯುಕ್ತಗಳನ್ನು ಹೊಂದಿರುತ್ತದೆ. ಇವು ಉರಿಯೂತ ಮತ್ತು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೆ, ಇದರ ಉರಿಯೂತದ ಗುಣಲಕ್ಷಣಗಳು ಊತವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ ಮೂಲವ್ಯಾಧಿಯಿಂದ ಉಂಟಾಗುವ ತುರಿಕೆ ಮತ್ತು ನೋವನ್ನು ನಿವಾರಿಸಲು ಇದು ಸಹಾಯ ಮಾಡುತ್ತದೆ.

ಮೂಲಂಗಿ ಜ್ಯೂಸ್ ಅಲ್ಲಿ ಕಂಡುಬರುವ ವಿಟಮಿನ್ ಎ ಮತ್ತು ಸಿ ಉತ್ಕರ್ಷಣ ನಿರೋಧಕಗಳಾಗಿ ಕಾರ್ಯನಿರ್ವಹಿಸುತ್ತದೆ. ಇವೆರಡೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡಲು ಬೇಕಾಗುವ ಅಂಶಗಳು. ಸ್ವತಂತ್ರ ರಾಡಿಕಲ್ಗಳಿಂದ ಉಂಟಾಗುವ ಹಾನಿಯಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಕ್ಯಾರೆಟ್ ಜ್ಯೂಸ್ ಕುಡಿಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಕ್ಯಾರೆಟ್ ಜ್ಯೂಸ್ ವಿಟಮಿನ್ ಬಿ6 ನ ಸಮೃದ್ಧ ಮೂಲವಾಗಿದೆ.

ಮೂಲಂಗಿಯಲ್ಲಿ ಕ್ಯಾನ್ಸರ್ ತಡೆಗಟ್ಟುವ ಕೆಲವು ಅಂಶಗಳಿವೆ ಎಂಬುದು ತಿಳಿದು ಬಂದಿದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿರುತ್ತದೆ. ಇದು ಕ್ಯಾನ್ಸರ್ ಕೋಶಗಳನ್ನು ತಡೆಯುತ್ತದೆ. ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸಲು ಮೂಲಂಗಿ ಜ್ಯೂಸ್ ಒಳ್ಳೆಯದು. ದೇಹಕ್ಕೆ ಸುಸ್ತು, ಆಯಾಸ, ಅಸ್ವಸ್ಥತೆಯ ಸಮಸ್ಯೆ ಉಂಟಾಗುತ್ತಿದ್ದರೆ ಮೂಲಂಗಿ ಜ್ಯೂಸ್ ಕುಡಿಯಿರಿ. ಇದು ನಿಮಗೆ ಶಕ್ತಿಯನ್ನು ನೀಡುತ್ತದೆ. ಜತೆಗೆ ದೇಹದ ಒತ್ತಡ ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ.

ಮೂಲಂಗಿ ಜ್ಯೂಸ್ ವಿಟಮಿನ್ ಸಿ ಅಂಶವನ್ನು ಒದಗಿಸುತ್ತದೆ. ಉತ್ಕರ್ಷಣ ನಿರೋಧಕಗಳು ನಿಮ್ಮ ಚರ್ಮವನ್ನು ಹಾನಿಗೊಳಗಾಗದಂತೆ ರಕ್ಷಿಸುತ್ತದೆ. ವಿಟಮಿನ್ ಸಿ ಕಾಲಜನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಇದು ಚರ್ಮದ ಆರೋಗ್ಯವನ್ನು ರಕ್ಷಿಸಲು ಸಹಾಯ ಮಾಡುತ್ತದೆ.