Bengaluru 28°C

ತುಳಸಿ ಎಲೆ ಸೇವನೆಯಿಂದ ಆರೋಗ್ಯಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತಾ?

ಹಿಂದೂ ಧರ್ಮದಲ್ಲಿ ತುಳಸಿಗೆ ವಿಶೇಷ ಸ್ಥಾನವಿದೆ. ಜೊತೆಗೆ ತುಳಸಿ ಸಸ್ಯವನ್ನು ಆಯುರ್ವೇದದಲ್ಲಿ ಬಹಳ ವಿಶೇಷವೆಂದು ಪರಿಗಣಿಸಲಾಗಿದೆ.

ಹಿಂದೂ ಧರ್ಮದಲ್ಲಿ ತುಳಸಿಗೆ ವಿಶೇಷ ಸ್ಥಾನವಿದೆ. ಜೊತೆಗೆ ತುಳಸಿ ಸಸ್ಯವನ್ನು ಆಯುರ್ವೇದದಲ್ಲಿ ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಜೊತೆಗೆ ತುಳಸಿ ಎಲೆಗಳು ಎಲ್ಲಾ ಋತುಗಳಲ್ಲಿಯೂ ಆರೋಗ್ಯಕ್ಕೆ ಒಳ್ಳೆಯದು. ಸಾಮಾನ್ಯವಾಗಿ ಚಳಿಗಾಲದ ತಂಪಾದ ವಾತಾವರಣ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅದರಲ್ಲಿಯೂ ಈ ಋತುವಿನಲ್ಲಿ ಶೀತ, ಕೆಮ್ಮು, ರೋಗನಿರೋಧಕ ಶಕ್ತಿಯಂತಹ ಸಮಸ್ಯೆಗಳನ್ನು ಎದುರಿಸುವುದು ಸಾಮಾನ್ಯವಾಗಿರುತ್ತದೆ. ಇಂತಹ ಸಂದರ್ಭಗಳಲ್ಲಿ, ತುಳಸಿ ಎಲೆಗಳನ್ನು ದಿನನಿತ್ಯ ಸೇವನೆ ಮಾಡುವುದು ಬಹಳ ಒಳ್ಳೆಯದು.


ತುಳಸಿ ಎಲೆಗಳನ್ನು ಪ್ರತಿದಿನ ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅದರ ಜೊತೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ತುಳಸಿಯನ್ನು ಸೇವನೆ ಮಾಡುವುದು ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ತುಳಸಿ ಎಲೆಗಳಲ್ಲಿ ವಿಟಮಿನ್ ಸಿ ಮತ್ತು ಸತುವಿನ ಅಂಶ ಸಮೃದ್ಧವಾಗಿದೆ. ಆದ್ದರಿಂದ ತುಳಸಿ ಎಲೆಗಳು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ಚಳಿಗಾಲದಲ್ಲಿ ಕಂಡು ಬರುವ ಶೀತ ಮತ್ತು ಗಂಟಲು ನೋವಿನಂತಹ ಸಮಸ್ಯೆಗಳಿಂದ ನಮ್ಮನ್ನು ರಕ್ಷಿಸುತ್ತದೆ.


ಪ್ರತಿನಿತ್ಯ ತುಳಸಿ ಎಲೆಗಳನ್ನು ಸೇವನೆ ಮಾಡುವುದರಿಂದ ಕಫ ಕಡಿಮೆಯಾಗುತ್ತದೆ. ಅದಲ್ಲದೆ ಇದರಲ್ಲಿರುವ ಉರಿಯೂತ ನಿವಾರಕ ಗುಣಗಳು ಗಂಟಲು ನೋವು ಮತ್ತು ಕೆಮ್ಮನ್ನು ಗುಣಪಡಿಸಲು ಪರಿಣಾಮಕಾರಿಯಾಗಿವೆ. ತುಳಸಿ ಎಲೆಗಳು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತವೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಅನೇಕರಿಗೆ ಆಹಾರ ಸರಿಯಾಗಿ ಜೀರ್ಣವಾಗದೆಯೇ ಬಳಲುತ್ತಿರುತ್ತಾರೆ. ಅಂತವರು ತುಳಸಿ ಎಲೆಗಳನ್ನು ಪ್ರತಿನಿತ್ಯ ಸೇವನೆ ಮಾಡುವುದು ಬಹಳ ಉಪಯುಕ್ತವಾಗಿದೆ.


ತುಳಸಿಯನ್ನು ನೈಸರ್ಗಿಕವಾಗಿ ಖಿನ್ನತೆಯನ್ನು ಶಮನ ಮಾಡುವ ಗುಣವಿರುವ ಸಸ್ಯ ಎಂದು ಹೇಳಲಾಗುತ್ತದೆ. ಇದು ಚಳಿಗಾಲದಲ್ಲಿ ಕಂಡುಬರುವಂತಹ ಕಾಲೋಚಿತ ಅಸ್ವಸ್ಥತೆ ಅಥವಾ ಒತ್ತಡ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ತುಳಸಿಯಲ್ಲಿ ಉತ್ಕರ್ಷಣ ನಿರೋಧಕ ಗುಣಗಳಿವೆ. ಇದು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಜೊತೆಗೆ ಹೃದಯಾಘಾತದ ಸಮಸ್ಯೆಗಳನ್ನು ತಡೆಯುತ್ತದೆ.


 

Nk Channel Final 21 09 2023