ಬೂದುಗುಂಬಳಕಾಯಿಂದ ಸಾಮಾನ್ಯವಾಗಿ ಇದರಿಂದ ಅನೇಕ ರೀತಿಯ ಭಕ್ಷ್ಯಗಳನ್ನು ತಯಾರಿಸುತ್ತೇವೆ. ಇವುಗಳಿಂದ ಕೆಲವರು ಹಲ್ವಾ, ಪೇಡಾ ಇನ್ನಿತರ ಸಿಹಿ ತಿಂಡಿಗಳನ್ನು ತಯಾರಿಸುತ್ತಾರೆ. ಇವು ಸಾಮಾನ್ಯವಾಗಿ ಕೆಲವೇ ಕೆಲವು ಪದಾರ್ಥಗಳನ್ನು ಮಾಡಲು ಬಳಕೆಯಾಗುತ್ತದೆಯಾದರೂ, ಕುಂಬಳಕಾಯಿಯಲ್ಲಿ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ.
ಈ ತರಕಾರಿ ಎಲ್ಲಾ ಋತುಗಳಲ್ಲಿಯೂ ಲಭ್ಯವಿದ್ದು ಇದರ ಬೆಲೆ ಕೂಡ ಅಗ್ಗವಾಗಿದೆ. ಕುಂಬಳಕಾಯಿಯಲ್ಲಿ ವಿಟಮಿನ್ ಸಿ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಸತುವಿನಂತಹ ವಿವಿಧ ಜೀವಸತ್ವಗಳು, ಪೋಷಕಾಂಶಗಳು ಮತ್ತು ಖನಿಜಗಳಿವೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಮತ್ತು ಅನೇಕ ರೋಗಗಳ ವಿರುದ್ಧ ಹೋರಾಡುತ್ತವೆ.
ಬೂದುಗುಂಬಳಕಾಯಿ ಸೇವನೆ ಮಾಡುವುದರಿಂದ ಮೆದುಳಿನ ಕಾರ್ಯವನ್ನು ಹೆಚ್ಚಿಸುತ್ತವೆ. ಹೊಟ್ಟೆಯಲ್ಲಿ ಹುಣ್ಣುಗಳಾಗಿದ್ದರೆ ಇದನ್ನು ನಿಯಮಿತವಾಗಿ ತಿನ್ನುವುದರಿಂದ ಸಮಸ್ಯೆಯನ್ನು ತ್ವರಿತವಾಗಿ ಗುಣಪಡಿಸಬಹುದು. ಅಲ್ಲದೆ ಕುಂಬಳಕಾಯಿ ಸೇವನೆ ಮಾಡುವುದರಿಂದ ದೇಹ ತಂಪಾಗಿರುತ್ತದೆ. ಜೊತೆಗೆ ನಿದ್ರಾಹೀನತೆಯ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ಇದರಿಂದ ಮಾಡುವ ಜ್ಯೂಸ್ ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

