ಮೊಳಕೆ ಬರಸಿದ ಹೆಸರುಕಾಳಿನಲ್ಲಿ ಫೋಲೇಟ್, ವಿಟಮಿನ್ ಬಿ9 ಸಮೃದ್ಧವಾಗಿವೆ. ಇವು ದೇಹದಲ್ಲಿ ಹೊಸ ರಕ್ತಕಣಗಳ ಸೃಷ್ಟಿಗೆ ಸಹಾಯ ಮಾಡುತ್ತವೆ. ಅದರಲ್ಲೂ ಕೆಂಪು ರಕ್ತ ಕಣಗಳನ್ನು ಹೆಚ್ಚುವಂತೆ ಮಾಡುತ್ತದೆ. ಅಲ್ಲದೇ ಹೆಸರುಕಾಳು ಉತ್ತಮ ಪ್ರಮಾಣದ ಪ್ರೋಟೀನ್, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಹೆಸರು ಕಾಳನ್ನು ನೀರಿನಲ್ಲಿ ನೆನಸಿಟ್ಟು, ಬಳಿಕ ಮೊಳಕೆ ಬಂದ ಮೇಲೆ ಸೇವಿಸುವುದರಿಂದ ಜೀರ್ಣಶಕ್ತಿ ಉತ್ತಮವಾಗುತ್ತೆ. ಇದರಲ್ಲಿರೋ ಪೌಷ್ಟಿಕಾಂಶ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ. ಅಲ್ಲದೆ ಫೈಬರ್ ಅಂಶವು ದೇಹದಲ್ಲಿ ಆಹಾರದ ಸಂಚಾರ ಸರಿಯಾಗಿ ಆಗುವಂತೆ ನೋಡಿಕೊಂಡು ಮಲಬದ್ಧತೆ ತೊಂದರೆಯನ್ನು ನಿವಾರಿಸುತ್ತದೆ.

ಮೊಳಕೆ ಬಂದ ಹೆಸರು ಕಾಳು ತಿನ್ನುವುದರಿಂದ ಹೃದಯದ ಆರೋಗ್ಯ ಉತ್ತಮವಾಗುತ್ತದೆ. ಇದರಲ್ಲಿರೋ ಒಮೇಗಾ ಫ್ಯಾಟೀ ಆಸಿಡ್ ದೇಹಕ್ಕೆ ಬೇಕಾದ ಒಳ್ಳೆಯ ಕೊಬ್ಬಿನ ಅಂಶ ನೀಡಿ ರಕ್ತನಾಳದ ಆರೋಗ್ಯ ಕಾಪಾಡುತ್ತೆ. ಇದರಲ್ಲಿನ ಆಂಟಿ ಇನ್ಪ್ಲಮೇಟರಿ ಗುಣ ರಕ್ತನಾಳಗಳ ಮೇಲಿರೋ ಒತ್ತಡವನ್ನೂ ಕಡಿಮೆ ಮಾಡುತ್ತದೆ. ರಕ್ತದ ಸಂಚಾರ ಹೆಚ್ಚಿಸಿ ದೇಹಕ್ಕೆ ಹೆಚ್ಚು ಆಕ್ಸಿಜನ್ ಸಿಗುವ ಹಾಗೆ ಮಾಡಿ ಸ್ಟ್ರೋಕ್ ಹಾಗೂ ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.

ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ಇನ್ಫೆಕ್ಷನ್ ಆಗೋದನ್ನ ತಡೆಯುತ್ತದೆ. ಇದರ ಜೊತೆ ವಿಟಮಿನ್ ಎ ಅಂಶ ಕೂಡ ಹೆಚ್ಚಾಗಿ ಇರೋದ್ರಿಂದ ದೇಹಕ್ಕೆ ಹೆಚ್ಚಿನ ಆಂಟಿ ಆಕ್ಸಿಡೆಂಟ್ಸ್ ಸಿಗುವ ರೀತಿ ನಿಗಾವಹಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ವಿಟಮಿನ್ ಎ, ಸಿ, ಅಮಿನೋ ಆಸಿಡ್ಸ್ ಹಾಗೂ ಪ್ರೋಟಿನ್ ಅಂಶ ದೇಹದಲ್ಲಿ ಫ್ರೀ ರಾಡಿಕಲ್ಸ್ ಸೇರದ ಹಾಗೆ ನೋಡಿಕೊಳ್ಳುತ್ತದೆ. ದೇಹದಲ್ಲಿ ಆಗುವ ಹಲವಾರು ಕ್ರಿಯೆಗಳ ಪರಿಣಾಮವಾಗಿ ಫ್ರೀ ರಾಡಿಕಲ್ಸ್ ಉತ್ಪತ್ತಿ ಆಗುತ್ತದೆ. ಇದರಿಂದ ದೇಹಕ್ಕೆ ಕ್ಯಾನ್ಸರ್ ಸೆಲ್ಸ್ ಸೇರುತ್ತದೆ. ಅಷ್ಟೇ ಅಲ್ಲದೆ ಸಾಕಷ್ಟು ಕಾಯಿಲೆಗಳು ಬರೋದಕ್ಕೆ ಇದು ಕಾರಣವಾಗುತ್ತದೆ. ಬೇಗ ಸುಸ್ತಾಗೋದು, ಕಣ್ಣು ಮಂಜಾಗುವುದು, ಹೃದಯಕ್ಕೆ ಸಂಬಂಧ ಪಟ್ಟ ತೊಂದರೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಇಂತಹ ತೊಂದರೆಗಳಿಂದ ದೂರವಿರಲು ಮೊಳಕೆ ಬಂದ ಹೆಸರು ಕಾಳನ್ನು ಸೇವಿಸಬೇಕು.

ಮೊಳಕೆ ಬಂದ ಹೆಸರು ಕಾಳಿನಲ್ಲಿ ಕ್ಯಾಲೋರೀಸ್ ಇಲ್ಲದ ಕಾರಣ ಇದನ್ನು ಎಷ್ಟು ತಿಂದರೂ ತೂಕ ಹೆಚ್ಚಾಗಲ್ಲ. ಬದಲಾಗಿ ತೂಕ ಕಡಿಮೆ ಆಗುತ್ತೆ. ಮೊಳಕೆ ಬಂದ ಹೆಸರು ಕಾಳನ್ನು ತಿನ್ನುವುದರಿಂದ ಇದರಲ್ಲಿರೋ ಫೈಬರ್ ನಿಮ್ಮ ದೇಹಕ್ಕೆ ಸೇರಿ ಹೊಟ್ಟೆ ತುಂಬುವ ಹಾಗೆ ಮಾಡುತ್ತೆ. ಆದರ ಜೊತೆ ಪದೇ ಪದೇ ಹಸಿವಾಗದ ರೀತಿ ನೋಡಿಕೊಳ್ಳುತ್ತದೆ. ಹಾಗೆಯೇ ಸ್ಥೂಲಕಾಯ ಮತ್ತು ಮಧುಮೇಹ ಕಾಯಿಲೆ ಬಾರದಂತೆ ನೋಡಿಕೊಳ್ಳುತ್ತದೆ.