ಮೂಲಂಗಿಯಲ್ಲಿ ವಿಟಮಿನ್ ಎ, ಬಿ ಮತ್ತು ಸಿ ಅಂಶವಿದೆ. ಅದರಲ್ಲಿ ರೋಗನಿರೋಧಕ ಶಕ್ತಿ ಇದೆ. ನೈಸರ್ಗಿಕವಾಗಿ ಭೂಮಿಯಲ್ಲಿ ಬೆಳೆಯುವಂತ ಈ ಮೂಲಂಗಿಯಲ್ಲಿ ವಿಟಮಿನ್ ಪ್ರಮಾಣ ಹೇರಳವಾಗಿರುತ್ತದೆ. ಮೂಲಂಗಿಯನ್ನು ತಿನ್ನುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ.

ಮೂಲಂಗಿಯಲ್ಲಿ ನೀರಿನಂಶ ಹೆಚ್ಚಾಗಿದ್ದು ಆರೋಗ್ಯವನ್ನು ವೃದ್ಧಿಸಲು ಹೆಚ್ಚು ಸಹಕಾರಿಯಾಗಿದೆ ಮೂಲಂಗಿ ಉತ್ತಮ ಆಹಾರವಾಗಿದೆ, ಮೂಲಂಗಿ ಸೇವನೆಯಿಂದ ಅದರಲ್ಲಿರುವ ವಿಟಿಮಿನ್ ಸಿ ನಮ್ಮ ದೇಹದಲ್ಲಿ ರಕ್ತಕಣಗಳನ್ನು ಹೆಚ್ಚಿಸುವುದೆ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ ಇದು ಕ್ಯಾನ್ಸರ್ ಬರುವುದನ್ನೂ ತಡೆಯಬಲ್ಲದು.

ಕೆಂಪು ರಕ್ತಕಣಗಳ ಬೆಳವಣಿಗೆ ಹಾಗೂ ಕಾಮಾಲೆ ರೋಗದ ಚಿಕಿತ್ಸೆಗೆ ಸಹಕಾರಿ. ಮೂಲಂಗಿಯ ಬೇರಿನ ಭಾಗ ಮಾತ್ರವಲ್ಲ, ಅದರ ಸೊಪ್ಪಿನ ಬಳಕೆ ಕೂಡ ಉಪಯುಕ್ತ. ಮೂಲಂಗಿ ಸೇವಿಸಿದರೆ ಬೇಗ ಹಸಿವಾಗುವುದಿಲ್ಲ. ಹೊಟ್ಟೆ ತುಂಬಿದ ಅನುಭವವವನ್ನೇ ನೀಡುತ್ತದೆ. ಅಂದರೆ ಅದು ದೇಹದ ತೂಕವನ್ನು ನಿಯಂತ್ರಿಸುತ್ತದೆ.

ಮೂತ್ರಕೋಶ ಮತ್ತು ಮೂತ್ರಪಿಂಡವನ್ನು ಶುಚೀಕರಿಸಲು ಸಹಕಾರಿಯಾದ ಮೂಲಂಗಿ ಸೇವನೆಯಿಂದ ಉರಿಮೂತ್ರ ಮುಂತಾದ ಮೂತ್ರ ಸಂಬಂಧಿ ಕಾಯಿಲೆಗಳಿಂದ ಮುಕ್ತಿ ಹೊಂದಲು ಅನುವಾಗುತ್ತದೆ. ಮೂಲಂಗಿಯನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಡಯಾಬಿಟಿಸ್ ಟೈಪ್ 2 ಅನ್ನು ತಡೆಯಬಹುದು. ಈ ತರಕಾರಿ ಡಯಾಬಿಟಿಕ್ ವಿರೋಧಿ ಗುಣಗಳನ್ನು ಹೊಂದಿದ್ದು ಅದು ಪ್ರತಿರಕ್ಷಣಾ ವ್ಯವಸ್ಥೆಯ ಕಾರ್ಯವನ್ನು ಹೆಚ್ಚಿಸುತ್ತದೆ.

ಗ್ಲೂಕೋಸ್ ತೆಗೆದುಕೊಳ್ಳುವಿಕೆಯನ್ನು ಸುಧಾರಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ. ಮೂಲಂಗಿಗಳು ನೇರವಾಗಿ ಇನ್ಸುಲಿನ್ ಪ್ರತಿಕ್ರಿಯೆ ಮತ್ತು ಗ್ಲೂಕೋಸ್ ಚಯಾಪಚಯವನ್ನು ಸುಧಾರಿಸುತ್ತದೆ ಎಂದು ಅಧ್ಯಯನವು ತಿಳಿಸಿವೆ.

ಹಸಿ ಮೂಲಂಗಿಯ ಚೂರುಗಳಿಗೆ ನಿಂಬೆರಸ, ಕಾಳು ಮೆಣಸಿನಪುಡಿ ಮತ್ತು ಉಪ್ಪು ಬೆರೆಸಿ ತಿನ್ನುವುದರಿಂದ ಕಾಮಾಲೆ ರೋಗ, ಕಣ್ಣಿನ ತೊಂದರೆ, ಅಜೀರ್ಣ ನಿವಾರಣೆಯಾಗುತ್ತದೆ.ಹಸಿ ಮೂಲಂಗಿಯನ್ನು ತುರಿದು ಉಪ್ಪು ಮತ್ತು ನಿಂಬೆರಸ ಸೇರಿಸಿ ತಿಂದರೆ ನೆಗಡಿ ನಿವಾರಣೆಯಾಗುತ್ತದೆ.

ಬಿಪಿ ತೊಂದರೆಯಿಂದ ಬಳಲುತ್ತಿರುವವರಿಗೆ ಮೂಲಂಗಿ ತುಂಬಾ ಪ್ರಯೋಜನಕಾರಿ. ಅಧಿಕ ರಕ್ತದೊತ್ತಡ ಹೊಂದಿರುವವರು ಮೂಲಂಗಿಯನ್ನು ತಿನ್ನುವುದರಿಂದ ಬ್ಲಡ್ ಪ್ಲೆಶರ್​ ನಿಯಂತ್ರಿಸಲು ಸಹಾಯಕವಾಗುತ್ತದೆ. ಇದಲ್ಲದೆ, ಈ ತರಕಾರಿಯಲ್ಲಿ ಗಣನೀಯ ಪ್ರಮಾಣದ ಪೊಟ್ಯಾಷಿಯಮ್ ಇದೆ. ಇದು ನಮ್ಮ ದೇಹದಲ್ಲಿ ಸೋಡಿಯಂ-ಪೊಟ್ಯಾಷಿಯಮ್ ಅನುಪಾತದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುತ್ತದೆ. ಇದರಿಂದ ರಕ್ತದೊತ್ತಡ ಸದಾ ನಿಯಂತ್ರಣದಲ್ಲಿರುತ್ತದೆ.