ಜನರ ಕಣ್ಣೀರೊರೆಸುವ ಕಾರ್ಯ ನಿರಂತರ : ಐಕಳ ಹರೀಶ್ ಶೆಟ್ಟಿ

ಮುಂಬಯಿ  : ಜಾಗತಿಕ ಬಂಟರ ಸಂಘವು ಒಂದು ದೊಡ್ದ ದೇವಸ್ಥಾನ ಇದ್ದಂತೆ. ಇಲ್ಲಿ ದಾನಿಗಳೇ ದೇವರು. ಪ್ರಾಯೋಜಕರೇ ಭಕ್ತರು. ಬಂಟ ಬಂಧುಗಳೇ ಆಶೀರ್ವಚಕರು. ಸಹೃದಯಿ ದೊಡ್ಡ ಮನಸ್ಸಿನ ದಾನಿಗಳೇ ಆಸ್ತಿಕರು. ಇವರನ್ನೆಲ್ಲರನ್ನೂ ಒಗ್ಗೂಡಿಸಿ ಮುನ್ನಡೆ ಯುವ ಉದ್ದೇಶ ಒಕ್ಕೂಟದ್ದು. ಇವರೆಲ್ಲರ ಸಹಯೋಗ ದಿಂದ ಸಮಾಜದ ಜನತೆಯ ಕಣ್ಣೋರೆಸುವ ಕೆಲಸ ಸಾಗುತ್ತಿದೆ. ಇಂತಹ ಸೇವಾ ಕೈಂಕರ್ಯ ದಲ್ಲಿ ನನಗೆ ತೃಪ್ತಿಯಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.

ಕುರ್ಲಾ ಪೂರ್ವದ ಚುನ್ನಾಭಟ್ಟಿ ಯಲ್ಲಿರುವ ಬಂಟರ ಭವನದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃಹದಲ್ಲಿ ನಡೆದ  ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಬಹಿರಂಗ ಅಧಿವೇಶನದ ಅಧ್ಯಕ್ಷತೆ ವಹಿಸಿ ಐಕಳ ಹರೀಶ್ ಶೆಟ್ಟಿ ಮಾತನಾಡಿದರು.

ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ ಕೆ.ಶೆಟ್ಟಿ ದೀಪ ಬೆಳಗಿಸಿ ಅಧಿವೇಶ ನವನ್ನು ಉದ್ಘಾಟಿಸಿದರು. ಐಕಳ ಹರೀಶ್ ಅವರೋರ್ವ ಅಪ್ರತಿಮ ಸಂಘಟಕ, ಸೇವಾಚಿಂ ತಕರು. ಇದೆಲ್ಲಾ ಅವರ ಮುಂದಾಳುತ್ವದಲ್ಲಿ ಯಶಸ್ವಿಯನ್ನು ಕಾಣುವ ಕಾರ್ಯಕ್ರಮಗಳು. ಸಮುದಾಯದ ಉನ್ನತೀಕರಣಕ್ಕೆ ಅವರ ದೂರದೃಷ್ಟಿತ್ವ ಪ್ರಶ್ನಾತೀತವಾದದ್ದು ಆದ್ದರಿಂದ ಬಂಟ್ಸ್ ಸಂಘ ಮುಂಬಯಿ ಸಹಯೋಗ ಸದಾ ಇದ್ದೇ ಇದೆ ಎಂದು  ಚಂದ್ರಹಾಸ ಕೆ.ಶೆಟ್ಟಿ ತಿಳಿಸಿದರು.
ಸ್ವಸಮುದಾಯವನ್ನು ಮತ್ತೆ ಬಲಿಷ್ಠವಾಗಿಸಿ ವಿಶ್ವಮಾನ್ಯ ಆಗಿಸುವ ಕನಸನ್ನು ನನಸಾಗಿಸುವ ಛಲಹೊತ್ತ ಐಕಳ ಬಂಟ ಸಮೂದಾಯದ  ಶಕ್ತಿಯೇ ಸರಿ. ಸೇವೆಯನ್ನೇ ವರವಾಗಿಸಿರುವ ಇವರು ಶಸಕ್ತರಿಂದ ಪಡೆದು ನಿಶಕ್ತರಿಗೆ ನೀಡಿ ಸರ್ವರಿಗೂ ಸಮಪಾಲು, ಸಮಬಾಳು ಕಲ್ಪಿಸುವ ಸೇವಾ ಮುಂಚೂಣಿಯಲ್ಲಿದ್ದಾರೆ. ಇದಕ್ಕೆ ಬಂಟರೆಲ್ಲರೂ ಸ್ಪಂದಿಸಬೇಕು. ಒಕ್ಕೂಟದ ಸೇವಾ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸೋಣ ಎಂದು ಮುಂಬಯಿನ ಪ್ರತಿಷ್ಠಿತ ಕೈಗಾರಿಕೋದ್ಯಮಿ, ಆರ್ಗ್ಯಾನಿಕ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್‌ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ತೋನ್ಸೆ ಆನಂದ ಎಂ.ಶೆಟ್ಟಿ ತಿಳಿಸಿದರು.

ಪ್ರಧಾನ ಅಭ್ಯಾಗತರಾಗಿ ಬಂಟ್ಸ್ ಮಾತೃ ಸಂಸ್ಥೆಯ ಉಪಾಧ್ಯಕ್ಷ  ಹೇಮಂತ್ ಶೆಟ್ಟಿ ಕಾವು, ಬಂಟ್ಸ್ ಸಂಘ ಮುಂಬಯಿ ಗೌ| ಪ್ರ| ಕಾರ್ಯದರ್ಶಿ ಡಾ| ಆರ್.ಕೆ ಶೆಟ್ಟಿ, ಬಾಂಬೇ ಬಂಟ್ಸ್ ಅಸೋಸಿಯೇಶನ್‌ನ ಅಧ್ಯಕ್ಷ ಮುರಳಿ ಕೆ.ಶೆಟ್ಟಿ, ಜವಾಬ್ ಅಧ್ಯಕ್ಷ ಸಿಎ| ಐ.ಆರ್ ಶೆಟ್ಟಿ, ಮುಲುಂಡ್ ಬಂಟ್ಸ್ ಅಧ್ಯಕ್ಷ ವಸಂತ್ ಶೆಟ್ಟಿ ಪಲಿಮಾರ್, ಚಂದ್ರಹಾಸ ಶೆಟ್ಟಿ , ಬಿ.ವಿವೇಕ್ ಶೆಟ್ಟಿ , ಕೋಶಾಧಿಕಾರಿ ಉಳ್ತೂರು ಮೋಹನ್‌ದಾಸ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಂಟರ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಮತ್ತು ಮಾಲಿನಿ ಪದ್ಮನಾಭ್, ಎಫ್‌ಡಬ್ಲೂ ಬಿಎ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಶ್ವೇತಾ ಜಯಕರ್ ದಂಪತಿಗಳನ್ನು ಸನ್ಮಾನಿಸಲಾಯಿತು. ಹಾಗೂ ಯಕ್ಷಗಾನ ಭಾಗವತ, ಪಟ್ಟ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿಯ ಸದಸ್ಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಮತ್ತು ಚಿತ್ರಾ ಜೆ ಶೆಟ್ಟಿ ದಂಪತಿಗಳಿಗೆ  ಅತಿಥಿಗಳು ಅಭಿನಂದನಾ ಸನ್ಮಾನಗೈದು ಗೌರವಿಸಿದರು.

ಪಟ್ಲ ಸತೀಶ್ ಶೆಟ್ಟಿ ಪ್ರಾರ್ಥನೆಯನ್ನಾಡಿದರು. ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಐಕಳ ಹರೀಶ್ ಅವರು ಒಕ್ಕೂಟದ ಮಹಾಪೋಷಕರು, ಪೋಷಕರು ಹಾಗೂ ಉಪಸ್ಥಿತವಿವಿಧ ಬಂಟ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅತಿಥಿಗಳನ್ನು ಗೌರವಿಸಿದರು.  ಅಶೋಕ್ ಪಕ್ಕಳ  ಮತ್ತು  ಕರ್ನೂರು ಮೋಹನ್ ರೈ  ಕಾರ್ಯಕ್ರಮ ನಿರೂಪಿ ಸಿದರು. ಒಕ್ಕೂಟದ ಜೊತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ವಂದನಾರ್ಪಣೆಗೈದರು. ಒಕ್ಕೂಟದ ಮಾಜೀ ಕೋಶಾಧಿಕಾರಿ ಬಾಲಕೃಷ್ಣ ರೈ ಕೊಲ್ಲಾಡಿ ತಂಡವು ಸಿದ್ಧ ಪಡಿಸಿದ ಒಕ್ಕೂಟದ ಸೇವಾ ಸಕ್ಷ್ಯಾಚಿತ್ರ ಸಮಾರಂಭದಲ್ಲಿ ಪ್ರದರ್ಶಿಸಲ್ಪಟ್ಟಿತು.

Raksha Deshpande

Recent Posts

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

8 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

16 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

18 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

39 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

53 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

1 hour ago