ಮಸ್ಕತ್ ನಲ್ಲಿ ಮನಸೆಳೆದ ಕೊರಗಜ್ಜನ ಚರಿತ್ರೆ ಯಕ್ಷಗಾನ ತಾಳಮದ್ದಳೆ

ಮಸ್ಕತ್: ಒಮನ್ ಮಸ್ಕತ್ ನಲ್ಲಿ ಪ್ರಪ್ರಥಮ ಬಾರಿ ತುಳು ನಾಡಿನ ಕಾರಣಿಕದ ದೈವ ಕೊರಗಜ್ಜನ ಚರಿತ್ರೆ ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಪ್ರದರ್ಶನ ಕಂಡಿತು.

ಶ್ರೀ ಶನೀಶ್ವರ ಭಕ್ತ ವೃಂದ, ಪಕ್ಷಿಕೆರೆ ತಂಡ ದವರು ಹರೀಶ್ ಶೆಟ್ಟಿ ಸೂಡ ವಿರಚಿತ “ಸ್ವಾಮಿ ಕೊರಗಜ್ಜ ” ಪ್ರಸಂಗ ವನ್ನು ಕಾಲಮಿತಿ ಯಲ್ಲಿ ಪ್ರಸ್ತುತಿ ಮಾಡಿದರು. ಬಿರುವ ಜವನೆರ್ ಮಸ್ಕತ್ ವಾಟ್ಸಾಪ್ ಬಳಗ ದ ಸೇವಾ ಸಂಘಟನೆ ಯು ಸಂಯೋಜಿಸಿದ ಈ ಕಾರ್ಯಕ್ರಮ ಸಾವಿರಾರು ತುಳುವ ಯಕ್ಷಗಾನ ಅಭಿಮಾನಿ ಗಳ ಹಾಗೂ ಕೊರಗಜ್ಜ ಭಕ್ತ ರ ಮನ ಗೆದ್ದಿತು.

ಹನುಮಗಿರಿ ಮೇಳ ದಲ್ಲಿ ಕಲಾ ವ್ಯವಸಾಯ ಮಾಡುತ್ತಿರುವ ಖ್ಯಾತ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಅವರು ಭಾಗವತಿಕೆ , ಪಕ್ಷಿಕೆರೆ ಪದ್ಮನಾಭ ಶೆಟ್ಟಿಗಾರ್, ಭಾಸ್ಕರ ಭಟ್ ಕಟೀಲು ಅವರು ಚೆಂಡೆ ಮದ್ದಳೆ ಹಿಮ್ಮೆಳ ದಲ್ಲಿ ಸಹಕರಿಸಿದರು.

ಶಿವಯೋಗಿ ಯಾಗಿ ಕದ್ರಿ ನವನೀತ ಶೆಟ್ಟಿ, ಕೊರಗಜ್ಜನಾಗಿ ಸದಾಶಿವ ಆಳ್ವ ತಲಪಾಡಿ, ಮೈರಕ್ಕೆ ಪಾತ್ರದಲ್ಲಿ ರಾಮಚಂದ್ರ ಮುಕ್ಕ, ಮೈಸಂದಾಯನಾಗಿ ಕಾವಲಕಟ್ಟೆ ದಿನೇಶ್ ಶೆಟ್ಟಿ, ಪಂಜಂದಾಯ ದೈವ ವಾಗಿ ದಯಾನಂದ ಜಿ. ಕತ್ತಲ್ಸಾರ್ , ಹಾಗೂ ಪುಷ್ಪರಾಜ್ ಕುಕ್ಕಾಜೆ ಅವರು ಅರಸು ದೈವ ಪಾತ್ರ ದಲ್ಲಿ ಅರ್ಥಗಾರಿಕೆ ಮಾಡಿದರು.

ತುಳು ಸಂದಿ,ಪಾರ್ದನ, ಗಾದೆ, ನುಡಿಕಟ್ಟು ಗಳ ಬಳಕೆ ಯೊಂದಿಗೆ ಗ್ರಾಮ್ಯ ತುಳು ಭಾಷೆ ಯ ಸೊಗಡನ್ನು ಅನಾವರಣ ಗೊಳಿಸಲಾಯಿತು. ಕಾರ್ಯಕ್ರಮದ ಪೋಷಕ ಮಸ್ಕತ್ ಫಾರ್ಮಸಿ ಯ ಆಡಳಿತ ನಿರ್ದೇಶಕ ಬಕುಲ್ ಭಾಯ್ ಮೆಹತಾ ಅವರನ್ನು  ಸನ್ಮಾನಿಸಲಾಯಿತು.

ಬಿರುವ ಜವನೆರ್ ಮಸ್ಕತ್ ನ ಸ್ಥಾಪಕ ಸಂಚಾಲಕ ಗುರುಪ್ರಸಾದ್ ರಾಮ ಅಮೀನ್ ನಾನಿಲ್ ಸ್ವಾಗತಿಸಿದರು. ಶ್ವೇತಾ ಸುವರ್ಣ ನಿರೂಪಿಸಿದರು. ಮಸ್ಕತ್ ಧಾರ್ ಸೈಟ್ ಶ್ರೀ ಕೃಷ್ಣ ದೇವಸ್ಥಾನ ದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ, ಚೆಂಡೆ ಬಳಗ ದೊಂದಿಗೆ ಕಲಾವಿದರನ್ನು ವೇದಿಕೆಗೆ ಬರಮಾಡಿ ಕೊಳ್ಳಲಾಯಿತು.

ಶಂಕರ್ ಉಪ್ಪುರ್ ದಂಪತಿಗಳು ದೀಪ ಪ್ರಜ್ವಲನ ಮಾಡಿದರು.ಮಕ್ಕಳು, ಮಹಿಳೆ ಯರು ಸೇರಿ ಹೆಚ್ಚಿನ ಪ್ರೇಕ್ಷಕ ರು ಚಾಪೆ ಯಲ್ಲಿ ಕುಳಿತು ಕೊರಗಜ್ಜ ನ ಕತೆ ಯನ್ನು ಉತ್ಸಾಹ ದಿಂದ ಆಸ್ವಾದಿಸಿದರು.

ಕಾರ್ಯಕ್ರಮ ದ ಕೊನೆಯಲ್ಲಿ ನಡೆದ “ತುಳುವರ ಕೂಟ”ದಲ್ಲಿ ಕದ್ರಿ ನವನೀತ ಶೆಟ್ಟಿ ಕಲಾವಿದರ ಪರಿಚಯ ಮಾಡಿದರು. ವಿವಿಧ ಸಮುದಾಯ ಗಳ ಪ್ರಮುಖ ರಾದ ಶಶಿಧರ ಶೆಟ್ಟಿ ಮಲ್ಲಾರ್,ನ್ಯಾಷನಲ್ ಬ್ಯಾಂಕ್ ಒಫ್ ಓಮನ್ ನ ರಾಮ್ಕಿ ಜಿ. ವಿ , ಲಕ್ಷ್ಮೀ ನಾರಾಯಣ ಆಚಾರ್ , ಮಂಜುನಾಥ್ ನಾಯಕ್, ಪದ್ಮಾಕರ ಮೆಂಡನ್, ಡಾ. ಸಿ. ಕೆ. ಅಂಚನ್, ರತ್ನಾಕರ ಆಚಾರ್ಯ, ರಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು .

ದಯಾನಂದ ಜಿ. ಕತ್ತಲ್ಸಾರ್ ಅವರು “ಕೂಟದ ಬಿನ್ನೆ ” ನೆಲೆಯಲ್ಲಿ ತುಳು ಯಕ್ಷಗಾನ ದ ಮೂಲಕ ಕೊರಗಜ್ಜ ನ ಕಥೆಯನ್ನು ತುಳುವ ರಿಗೆ ಪರಿಚಯಿಸಿದ ಸಂಘಟಕ ರನ್ನು ಅಭಿನಂದಿಸಿದರು.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

5 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

6 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

6 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

6 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

7 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

7 hours ago