ಸಾಮಾಜಿಕ-ಸಾಂಸ್ಕೃತಿಕ ಕ್ಷೇತ್ರದ ಸಾಧಕ ಬಹ್ರೈನ್ ಕನ್ನಡಿಗ ಲೀಲಾಧರ್ ಬೈಕಂಪಾಡಿಗೆ ‘ಕರ್ನಾಟಕ ಸೌರಭ’ ಪ್ರಶಸ್ತಿ

ಮಂಗಳೂರು: ಅತಿ ಎಳವೆಯಿಂದ ಆರಂಭಿಸಿ ದೇಶ-ಪರದೇಶದಲ್ಲಿ ತಾನು ನಿರಂತರವಾಗಿ ಗೈಯುತ್ತಾ ಬಂದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಸಾಂಘಿಕ ಸೇವೆ ಹಾಗೂ ಸಾಧನೆಗಳಿಗಾಗಿ ಬಹ್ರೈನ್ ಕನ್ನಡಿಗ ಲೀಲಾಧರ್ ಬೈಕಂಪಾಡಿಯವರು ಇತ್ತೀಚೆಗೆ ‘ಕರ್ನಾಟಕ ಸೌರಭ’ ಪ್ರಶಸ್ತಿಯೊಂದಿಗೆ ಪುರಸ್ಕೃತರಾದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ಮಂಜುನಾಥ್ ಎಜುಕೇಷನ್ ಟ್ರಸ್ಟ್ ಮಂಗಳೂರು ಈ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಸಂಪನ್ನಗೊಂಡ ‘ತುಳು-ಕನ್ನಡ ಸಾಂಸ್ಕೃತಿಕ ಸೌರಭ’ ಕಾರ್ಯಕ್ರಮದಲ್ಲಿ ಇವರಿಗೆ ಈ ಗೌರವವನ್ನು ನೀಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷೆಯಾದ ಜಾನಕಿ ಬ್ರಹ್ಮಾವರ ಸಹಿತವಾಗಿ ವಿವಿಧ ಗಣ್ಯರು ಉಪಸ್ಥಿತರಿದ್ದರು.

ತುಳು-ಕನ್ನಡ ಕವಿಗೋಷ್ಠಿ ಹಾಗೂ ವಿವಿಧ ಪ್ರತಿಭಾ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆಯನ್ನೂ ಹಮ್ಮಿಕೊಳ್ಳಲಾಗಿದ್ದ ಈ ವೈಶಿಷ್ಠ್ಯಪೂರ್ಣ ಕಾರ್ಯಕ್ರಮವು ಇತ್ತೀಚೆಗೆ ಮಂಗಳೂರಿನ ‘ತುಳು ಚಾವಡಿ’ ಭವನದ ‘ಸಿರಿ ಚಾವಡಿ’ ಸಭಾಗೃಹದಲ್ಲಿ ಜರಗಿತು.

ತನ್ನ ಬಹುಮುಖ ಸೇವೆ ಮತ್ತು ಸಾಧನೆಗಳಿಗಾಗಿ ಹಾಗೂ ಸಾಂಘಿಕ ಚಟುವಟಿಕೆಗಳಿಗಾಗಿ ಲೀಲಾಧರ್ ಬೈಕಂಪಾಡಿಯವರು ಈಗಾಗಲೇ ರಾಷ್ಟ್ರೀಯ ಭೂಷಣ ಪ್ರಶಸ್ತಿ [ಬೆಂಗಳೂರು], ರಾಷ್ಟ್ರೀಯ ಏಕತಾ ಪುರಸ್ಕಾರ [ನವ ದೆಹಲಿ], ಸಮಾಜ ರತ್ನ ರಾಷ್ಟ್ರೀಯ ಪ್ರಶಸ್ತಿ [ಬೆಂಗಳೂರು] ಮತ್ತು ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ [ಬೆಂಗಳೂರು] ಮುಂತಾದ ಪುರಸ್ಕಾರಗಳನ್ನು ಪಡೆದಿರುತ್ತಾರೆ. ಗತ 19 ವರ್ಷಗಳಿಂದ ಉದ್ಯೋಗ ನಿಮಿತ್ತ ಕೊಲ್ಲಿಯ ಬಹ್ರೈನ್ ದೇಶದಲ್ಲಿ ವಾಸ್ತವ್ಯವಿರುವ ಇವರು ಅಲ್ಲಿನ ಖಾಸಗಿ ಕಂಪನಿ ಸಮೂಹವೊಂದರ ವಿತ್ತ ಪ್ರಬಂಧಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬಹ್ರೈನ್ನಲ್ಲಿದ್ದುಕೊಂಡೇ ಇವರು ನಾಡು ಮತ್ತು ಹೊರನಾಡಿನ ವಿವಿಧ ಸಮೂಹ ಮತ್ತು ಸಂಘಟನೆಗಳ ಮೂಲಕ ತುಳುವರು, ಕನ್ನಡಿಗರು ಹಾಗೂ ಭಾರತೀಯರಿಗೆ ಸಂಬಂಧಿಸಿದಂತೆ ವಿವಿಧ ಸಾಮಾಜಿಕ, ಸಾಂಘಿಕ, ಸಾಹಿತ್ಯಕ ಹಾಗೂ ಜನಪರ ಸೇವಾ ಕಾರ್ಯಚಟುವಟಿಕೆಗಳಲ್ಲಿ ಸದಾ ನಿರತರಾಗಿದ್ದಾರೆ. ಈ ಕಾರಣದಿಂದಾಗಿ ಇವರೋರ್ವ ಚತುರ ಸಂಘಟಕ, ಸಮಾಜ ಸೇವಾ ಕಾರ್ಯಕರ್ತ, ಪ್ರಶಸ್ತಿ ವಿಜೇತ ರಂಗ ಕಲಾವಿದ, ಯುವ ಸಾಹಿತಿ, ಸಮಾಜಮುಖಿ ಚಿಂತನೆಯ ತಥಾ ಪ್ರಗತಿಪರ ವಿಚಾರಧಾರೆಯ ಯುವ ಸಾಮಾಜಿಕ ಮುಂದಾಳುವಾಗಿ ನಾಡಿನ ಮತ್ತು ಹೊರನಾಡಿನ ತುಳುವರು, ಕನ್ನಡಿಗರು ಹಾಗೂ ಭಾರತೀಯರ ಮಧ್ಯೆ ಬಹಳವಾಗಿ ಗುರುತಿಸಿಕೊಂಡವರಾಗಿದ್ದಾರೆ.   

ಬಹ್ರೈನ್ನಲ್ಲಿ ಇಂಡಿಯನ್ ಕ್ಲಬ್, ಕರ್ನಾಟಕ ಸೋಶಿಯಲ್ ಕ್ಲಬ್, ಮಹಾರಾಷ್ಟ್ರ ಕಲ್ಚರಲ್ ಸೊಸೈಟಿ ಮುಂತಾದ ಸಂಸ್ಥೆಗಳಲ್ಲಿ ಸದಸ್ಯರಾಗಿರುವ ಇವರು ಸದ್ಯ ಮೊಗವೀರ್ಸ್ ಬಹ್ರೈನ್ ಸಂಸ್ಥೆಯ ದ್ವಿತೀಯ ಅವಧಿಯ ಅಧ್ಯಕ್ಷರಾಗಿಯೂ ಸದಾ ಸಕ್ರಿಯರಾಗಿದ್ದಾರೆ. 

Desk

Recent Posts

ಸಾಂಕ್ರಾಮಿಕ ರೋಗ ತಡೆಗೆ ಕೊಡಗು ಜಿಲ್ಲಾಡಳಿತ ಸೂಚನೆ

ಚಬೇಸಿಗೆ ಕಾಲವಾಗಿರುವುದರಿಂದ, ಜಿಲ್ಲೆಯಲ್ಲಿರುವ ಎಲ್ಲಾ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ಮದುವೆ ಸಮಾರಂಭಗಳು, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ…

6 mins ago

ಮೋದಿ ಭಾಷಣ ವಾಸ್ತವದಿಂದ ಕೂಡಿರುವುದಿಲ್ಲ: ಶರದ್ ಪವಾರ್

ಇಂತಹ ಪ್ರಧಾನಿಯನ್ನು ಹಿಂದೆಂದೂ ನಾನು ಕಂಡಿಲ್ಲ. ಅವರ ಯಾವ ಭಾಷಣಗಳು ವಾಸ್ತವದಿಂದ ಕೂಡಿರುವುದಿಲ್ಲ. ನನ್ನನ್ನು ಮತ್ತು ಉದ್ಧವ್ ಠಾಕ್ರೆಯನ್ನು ಗುರಿಯಾಗಿಸಿಕೊಂಡು…

6 mins ago

ಕ್ರೂಸರ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ: ಮೂವರು ಸಾವು

ಬೀದರ್ ತಾಲೂಕಿನ ಚಟ್ನಳ್ಳಿ ಗ್ರಾಮದ ಬಳಿ  ಕ್ರೂಸರ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ…

26 mins ago

ಶ್ರೀ ಕೃಷ್ಣ ಧಾಮದಲ್ಲಿ ಉಚಿತ ಸಾಮೂಹಿಕ ಉಪನಯನ

ನಗರದ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ ಟಿ.ಕೆ ಲೇಔಟ್ ನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ…

46 mins ago

ದೇಶದದ್ಯಾಂತ ಪ್ರಜ್ವಲಿಸಿದ ಪ್ರಜ್ವಲ್‌ ಪೆನ್‍ಡ್ರೈವ್; ಈತ ಅದೆಂಥಾ ವಿಕೃತ ಕಾಮಿಯಾಗಿರಬೇಡ

ಹಾಸನದ ಸಂಸದರೂ ಆಗಿರೋ  ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಭವಾನಿ ದಂಪತಿಯ ಹಿರಿಯ ಮಗ ಪ್ರಜ್ವಲ್. ಈತನ ಕಾಮಕಾಂಡದ…

1 hour ago

ಜಾತಿ ನಿಂದನೆ ಕೇಸ್ ಹೆದರಿದ ಯುವಕ ಆತ್ಮಹತ್ಯೆಗೆ ಶರಣು

ಜಾತಿ ನಿಂದನೆ ಕೇಸ್‌ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ…

2 hours ago