News Karnataka Kannada
Saturday, April 27 2024
ಅಮೇರಿಕಾ

ಅಮೇರಿಕಾದ ಬಾಲ್ಟಿಮೋರ್​ನ ಫ್ರಾನ್ಸಿಸ್ ಸ್ಕಾಟ್ ಸೇತುವೆಗೆ ಹಡಗು ಡಿಕ್ಕಿ: ಸೇತುವೆ ಕುಸಿತ

ಬಾಲ್ಟಿಮೋರ್‌ನ ಅತಿ ಉದ್ದವಾದ ಫ್ರಾನ್ಸಿಸ್ ಸ್ಕಾಟ್ ಸೇತುವೆಗೆ ದೊಡ್ಡ ಸರಕು ಹಡಗು ಡಿಕ್ಕಿ ಹೊಡೆದ ಪರಿಣಾಮ ಕುಸಿದು ಬಿದ್ದಿದೆ. ವರದಿಗಳ ಪ್ರಕಾರ, ಸೇತುವೆ ಕುಸಿಯುವ ಮೊದಲು ಬೆಂಕಿ ಹೊತ್ತಿಕೊಂಡಿತು ಮತ್ತು ಹಲವಾರು ವಾಹನಗಳು ಕೆಳಗಿರುವ ನೀರಿನಲ್ಲಿ ಬಿದ್ದವು ಎನ್ನುವ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
Photo Credit : NewsKarnataka

ಅಮೇರಿಕಾ: ಬಾಲ್ಟಿಮೋರ್‌ನ ಅತಿ ಉದ್ದವಾದ ಫ್ರಾನ್ಸಿಸ್ ಸ್ಕಾಟ್ ಸೇತುವೆಗೆ ದೊಡ್ಡ ಸರಕು ಹಡಗು ಡಿಕ್ಕಿ ಹೊಡೆದ ಪರಿಣಾಮ ಕುಸಿದು ಬಿದ್ದಿದೆ. ವರದಿಗಳ ಪ್ರಕಾರ, ಸೇತುವೆ ಕುಸಿಯುವ ಮೊದಲು ಬೆಂಕಿ ಹೊತ್ತಿಕೊಂಡಿತು ಮತ್ತು ಹಲವಾರು ವಾಹನಗಳು ಕೆಳಗಿರುವ ನೀರಿನಲ್ಲಿ ಬಿದ್ದವು ಎನ್ನುವ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಸೇತುವೆ ಕುಸಿದಾಗ ಸುಮಾರು ಏಳು ಮಂದಿ ಕಟ್ಟಡ ಕಾರ್ಮಿಕರು ಮತ್ತು ಮೂರ್ನಾಲ್ಕು ನಾಗರಿಕ ವಾಹನಗಳು ಸೇತುವೆ ಮೇಲೆ ಇದ್ದವು. ಘಟನೆಯ ನಂತರ ಸೇತುವೆಯನ್ನು ವಾಹನ ಸಂಚಾರಕ್ಕೆ ಬಂದ್ ಮಾಡಲಾಗಿದೆ. ಸುರಕ್ಷತಾ ಕಾರಣಗಳಿಗಾಗಿ ಅಧಿಕಾರಿಗಳು ಎರಡೂ ದಿಕ್ಕುಗಳಲ್ಲಿ ಎಲ್ಲಾ ಲೇನ್‌ಗಳನ್ನು ಮುಚ್ಚಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಾವುನೋವುಗಳ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಈ ಸೇತುವೆ 47 ವರ್ಷಗಳಷ್ಟು ಹಳೆಯದ್ದಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು