ಅಮೇರಿಕಾ

ಅಮೇರಿಕಾದಲ್ಲಿ ತುಳು ತರಗತಿಗಳ ಉದ್ಘಾಟನೆ; ಭಾರತದ ಪುರಾತನ ಭಾಷೆಯನ್ನು ಉಳಿಸಿ ಬೆಳೆಸುವ ಉದ್ದೇಶ

ಅಮೇರಿಕಾ: ಆಲ್‌ ಇಂಡಿಯಾ ತುಳು ಅಸೋಸಿಯೇಷನ್‌ ಆಯೋಜಿಸಿದ ʼಬಲೆ ತುಳು ಪಾತೆರ್ಗಾʼದ 2024ರ ಬ್ಯಾಚ್‌ನ ಉದ್ಘಾಟನೆಯಾಗಿದ್ದು, ವರ್ಚುವಲ್‌ ಆಗಿ ನಡೆದ ಕಾರ್ಯಕ್ರಮದಲ್ಲಿ ಜಗತ್ತಿನಾದ್ಯಂತ ಇರುವ ತುಳು ಕಲಿಕಾ ಆಸಕ್ತರು ಭಾಗವಹಿಸಿದರು. 2023ರ ಮೊದಲ ಬ್ಯಾಚ್‌ನ ಯಶಸ್ವಿ ಮುಕ್ತಾಯದ ನಂತರ ಎರಡನೆ ಬ್ಯಾಚ್‌ ಪ್ರಾರಂಭವಾಗಿದೆ.

ಸಮಾರಂಭದಲ್ಲಿ ತುಳು ಭಾಷೆಯ ಕಲಿಯುವಿಕೆ ಹಾಗು ಉಳಿಸುವಿಕೆಯ ಬಗ್ಗೆ ಚರ್ಚೆಯಾಗಿದ್ದು, ಪುರಾತನ ಭಾಷೆಗಳಲ್ಲಿ ಒಂದಾದ ತುಳುವಿನ ಸಾಂಸ್ಕೃತಿಕ ಮಹತ್ವದ ಬಗ್ಗೆ ಆಹ್ವಾನಿತರು ಮಾತನಾಡಿದರು.

ಈ ಸಂದರ್ಭದಲ್ಲಿ ತುಳು ಭಾಷೆಯ ಇತಿಹಾಸದ ಬಗ್ಗೆ ಮಾತನಾಡಿದ ಮುಂಬೈ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕಿ ಡಾ.ಪೂರ್ಣಿಮಾ ಶೆಟ್ಟಿ, ಮಕ್ಕಳಿಗೆ ತುಳು ಕಲಿಸುವಲ್ಲಿ ಪೋಷಕರ ಪಾತ್ರದ ಬಗ್ಗೆ ತಿಳಿಸಿದರು.

AATA ನಿರ್ದೇಶಕ ಮಿಚಿಗನ್‌ ಪ್ರಶಾಂತ್‌ ಕುಮಾರ್‌ ರಚನೆಯ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ʼವಾ ಪೋರ್ಲುಯಾʼ ತುಳು ಹಾಡನ್ನು ಪೂರ್ಣಿಮಾ ಶೆಟ್ಟಿ ಬಿಡುಗಡೆ ಮಾಡಿದರು. ಇದನ್ನು ಹಾಡಿದ ವಿಶ್ವೇಶ್‌ ಭಟ್‌ ಸಂಗೀತ ಸಂಯೋಜನೆಯನ್ನೂ ಮಾಡಿದ್ದಾರೆ.

ಬಲೆ ತುಳು ಪಾತೆರ್ಗಾದ ಪಠ್ಯಕ್ರಮ ಹಾಗು ವೇಳಾಪಟ್ಟಿಯ ಬಗ್ಗೆ ಮಾಹಿತಿ ನೀಡಿದ AATAದ ಸಂಸ್ಥಾಪಕ ಅಧ್ಯಕ್ಷ ಭಾಸ್ಕರ್‌ ಶೇರಿಗಾರ್‌, ಭಾಗವಹಿಸಿದ ಪ್ರತಿಯೊಬ್ಬರೂ ತರಗತಿಗಳ ಕೊನೆಯಲ್ಲಿ ತುಳುವಿನಲ್ಲಿ ಸಂಭಾಷಿಸಲು ಸಮರ್ಥರಾಗುವ ಬಗ್ಗೆ ಭರವಸೆ ನೀಡಿದ್ದಾರೆ.

AATA ರಾಯಭಾರಿ ರಿತೇಶ್‌ ಶೆಟ್ಟಿ, ಅಧ್ಯಕ್ಷರಾದ ಶ್ರೀವಳ್ಳಿ ರೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Maithri S

Recent Posts

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

6 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

18 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

23 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

37 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

59 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

1 hour ago