Categories: ಅಮೇರಿಕಾ

ಮೂರನೇ ಬಾರಿಗೆ ಬಾಹ್ಯಾಕಾಶಕ್ಕೆ ಹಾರಲು ಸಜ್ಜಾದ ಭಾರತ ಸಂಜಾತ ಗಗನಯಾತ್ರಿ ಸುನಿತಾ ವಿಲಿಯಮ್ಸ್

ವಾಷಿಂಗ್ಟನ್: ಭಾರತ ಸಂಜಾತ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮೂರನೇ ಬಾರಿಗೆ ಮಂಗಳವಾರ ಬಾಹ್ಯಾಕಾಶಕ್ಕೆ ಹಾರಲು ಸಜ್ಜಾಗಿದ್ದಾರೆ.

ಗಗನಯಾತ್ರಿಯನ್ನು ಒಳಗೊಂಡ ಬೋಯಿಂಗ್ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆ ಮೂಲಕ ಅವರು ಬಾಹ್ಯಾಕಾಶಕ್ಕೆ ಹಾರಲಿದ್ದಾರೆ. 58 ವರ್ಷದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಹೊತ್ತು ಸ್ಟಾರ್‌ಲೈನರ್ ನೌಕೆ ಗಗನಕ್ಕೆ ಚಿಮ್ಮಲಿದೆ.

ಬೋಯಿಂಗ್ ಸಂಸ್ಥೆಯ ಬಹುದಿನಗಳ ಕಾಯುವಿಕೆಯು ನಾಳೆ ಅಂತ್ಯವಾಗಲಿದೆ. ಅಮೆರಿಕದ ಸ್ಥಳೀಯ ಕಾಲಮಾನ ಸೋಮವಾರ ರಾತ್ರಿ 22.34 ಸ್ಟಾರ್‌ಲೈನರ್ ನೌಕೆ ಉಡ್ಡಯನ ಆಗಲಿದೆ.

‘ನಾವೆಲ್ಲರೂ ಸಂಪೂರ್ಣ ಸಿದ್ಧವಾಗಿದ್ದೇವೆ. ನಮ್ಮ ಕುಟುಂಬ ಮತ್ತು ಗೆಳೆಯರಿಗೂ ಇದರ ಬಗ್ಗೆ ತಿಳಿದಿದೆ. ನಾವು ಈ ಬಗ್ಗೆ ಅವರ ಜೊತೆ ಮಾತನಾಡಿದ್ದೇವೆ. ಅವರು ಖುಷಿ ಮತ್ತು ಹೆಮ್ಮೆಯಿಂದಿದ್ದಾರೆ. ನಾನು ಈ ಯಾತ್ರೆಯ ಭಾಗವಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ’ ಎಂದು ಸುನಿತಾ ಹೇಳಿರುವುದಾಗಿ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

Chaitra Kulal

Recent Posts

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

8 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

13 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

26 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

29 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

59 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

1 hour ago