ಬಹ್ರೈನ್: ಉದ್ಘಾಟನೆಗೆ ಸಜ್ಜಾದ ಬಹ್ರೈನ್‌ನ ಕನ್ನಡ ಭವನ

ಬಹ್ರೈನ್: ಬಹ್ರೈನ್ ದೇಶದ ರಾಜಧಾನಿ ಮನಾಮಾದಲ್ಲಿ ಕನ್ನಡ ಸಂಘ ಬಹ್ರೈನ್ ಕಟ್ಟಿದ ನೂತನ ಕನ್ನಡ ಭವನ ಇದೇ ಸೆಪ್ಟೆಂಬರ್ 23 ರಂದು ಉದ್ಘಾಟನೆಗೊಳ್ಳಲಿದೆ. ಬಹ್ರೈನ್‌ನಲ್ಲಿ ನೆಲೆಸಿರುವ ಕನ್ನಡಿಗರ ಮಹತ್ವಾಕಾಂಕ್ಷೆಯ ಈ ಭವನವನ್ನು ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರದ ನೆರವಿನಿಂದ ಸುಮಾರು ಹತ್ತು ಕೋಟಿ ರೂಪಾಯಿ ವೆಚ್ಚದ, ಭಾರತದ ಹೊರಗೆ ನಿರ್ಮಿತವಾದ ಪ್ರಥಮ ಕನ್ನಡ ಭವನ ಇದಾಗಿದೆ. ನಾಲ್ಕು ಅಂತಸ್ತಿನ ಕನ್ನಡ ಭವನವು ಬಹುಪಯೋಗಿ ಸಭಾಂಗಣ, ಗ್ರಂಥಾಲಯ, ಕನ್ನಡ, ಯೋಗ, ಯಕ್ಷಗಾನ ತರಬೇತಿ ಕೇಂದ್ರ, ವಾಣಿಜ್ಯ ಮಳಿಗೆಗಳನ್ನು ಒಳಗೊಂಡಿದೆ.

ಸೀಮಿತ ಸ್ಥಳಾವಕಾಶ ಇರುವ ಕಾರಣ, ಆಹ್ವಾನಿತರು ಮತ್ತು ಸಂಘದ ಸದಸ್ಯರಿಗೆ ಮಾತ್ರ ಅವಕಾಶವಿರುವ ಕಾರ್ಯಕ್ರಮದಲ್ಲಿ ಬೆಳಿಗ್ಗೆ 9 ಗಂಟೆಗೆ ಕಟ್ಟಡದ ಉದ್ಘಾಟನೆ ನಡೆಯಲಿದೆ.

ಸನ್ಮಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಜೆ 4.30 ರಿಂದ ಕಿಂಗ್ಡಮ್ ಹಾಲ್, ನ್ಯೂ ಮಿಲೇನಿಯಮ್ ಸ್ಕೂಲ್, ಜಿಂಜ್ ನಲ್ಲಿ ನಡೆಯಲಿದ್ದು, ಎಲ್ಲರಿಗೂ ಮುಕ್ತ ಪ್ರವೇಶವಿರುತ್ತದೆ.

ಮಾಜಿ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರಿಂದ ಶುಭಾಶಂಸನೆ ಇರಲಿದ್ದು, ಭಾರತದ ರಾಯಭಾರಿ ಶ್ರೀ ಪಿಯೂಷ್ ಶ್ರೀವಾಸ್ತವ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಗೌರವಾನ್ವಿತ ಅತಿಥಿಗಳಾಗಿ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಶ್ರೀ ಜಯಪ್ರಕಾಶ್ ಹೆಗ್ಡೆ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ, ಅನಿವಾಸಿ ಕನ್ನಡಿಗರ ವೇದಿಕೆಯ ಮಾಜಿ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ್, ವಿಕೆ‌ಎಲ್ ಹೋಲ್ಡಿಂಗ್ ಮತ್ತು ಅಲ್ ನಮಾಲ್ ಗ್ರೂಪ್ ಅಧ್ಯಕ್ಷರಾದ ಡಾ. ವರ್ಗೀಸ್ ಕುರಿಯನ್, ವಿಶ್ವವಾಣಿ ದಿನಪತ್ರಿಕೆಯ ಸಂಪಾದಕರಾದ ಶ್ರೀ ವಿಶ್ವೇಶ್ವರ್ ಭಟ್, ಕನ್ನಡಪ್ರಭ ದಿನಪತ್ರಿಕೆ ಮತ್ತು ಸುವರ್ಣ ನ್ಯೂಸ್ ಸಂಪಾದಕರಾದ ಶ್ರೀ ರವಿ ಹೆಗಡೆ, ಬಹ್ರೈನ್ ಕ್ಯಾಪಿಟಲ್ ಗವರ್ನರೇಟ್‌ನ ಮಾಹಿತಿ ಮತ್ತು ಅನುಸರಣೆ ವಿಭಾಗದ ನಿರ್ದೇಶಕರಾದ ಶ್ರೀ ಯುಸುಫ್ ಲೋರಿ, ಉದ್ಯಮಿಗಳಾದ ಶ್ರೀ ಕೆ. ಪ್ರಕಾಶ್ ಶೆಟ್ಟಿ, ಕನ್ನಡಪ್ರಭ ಪುರವಣಿ ಸಂಪಾದಕರೂ, ಲೇಖಕರೂ ಆದ ಶ್ರೀ ಗಿರೀಶ್ ರಾವ್ ಹತ್ವಾರ್ (ಜೋಗಿ) ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ, ಶ್ರೀ ವಿ ಕೆ ರಾಜಶೇಖರನ್ ಪಿಳ್ಳೈ, ಅಧ್ಯಕ್ಷರು, ನ್ಯಾಷನಲ್ ಗ್ರೂಪ್ ಆಫ್ ಕಂಪನಿಗಳು; ಶ್ರೀ ಕೆ. ಮೋಹನ್‌ದೇವ್ ಆಳ್ವ, ಅಧ್ಯಕ್ಷರು -ಅಖಿಲ ಕರ್ನಾಟಕ ಮಕ್ಕಳ ಕೂಟ; ಶ್ರೀ ಆನಂದ ಭಟ್, ಉದ್ಯಮಿ, ಬೆಂಗಳೂರು; ಶ್ರೀ ಕೆ ಜಿ ಬಾಬುರಾಜನ್, ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಬಿಕೆಜಿ ಹೋಲ್ಡಿಂಗ್, ಬಹ್ರೇನ್, ಕತಾರ್ ಮತ್ತು ಒಮಾನ್; ಶ್ರೀ ಮೊಹಮ್ಮದ್ ಮನ್ಸೂರ್, ವ್ಯವಸ್ಥಾಪಕ ನಿರ್ದೇಶಕರು, ಸಾರಾ ಗ್ರೂಪ್ ಮತ್ತು ಸಲಹೆಗಾರರು, ಬಹ್ರೈನ್ ಕ್ರಿಕೆಟ್ ಬೋರ್ಡ್; ಶ್ರೀ ವಕವಾಡಿ ಪ್ರವೀಣ್ ಶೆಟ್ಟಿ, ಅಧ್ಯಕ್ಷರು, ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್, ಯು‌ಎ‌ಇ; ಶ್ರೀ ನವೀನ್ ಡಿ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರು, ಔಮಾ ಮಿಡಲ್ ಈಸ್ಟ್; ಮತ್ತು ಶ್ರೀ ನವೀನ್ ಕುಮಾರ್ ಶೆಟ್ಟಿ, ರಿಫಾ ಸೇರಿರುತ್ತಾರೆ.

ಕನ್ನಡ ಸಂಘದ ಅಧ್ಯಕ್ಷರಾದ ಶ್ರೀ ಪ್ರದೀಪ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಕಿರಣ್ ಉಪಾಧ್ಯಾಯ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

“ಬಹ್ರೇನ್‌ನ ಎಲ್ಲಾ ಕನ್ನಡಿಗರಿಗೆ ಇದು ಹೆಮ್ಮೆಯ ಕ್ಷಣವಾಗಿದೆ, ಇಂದು ನಮ್ಮ ಬಹುಕಾಲದ ಕನಸು ಈಡೇರುತ್ತಿದೆ. ಕನ್ನಡ ಭವನವು ಸಮುದಾಯದ ಪ್ರತಿಷ್ಠಿತ ಯೋಜನೆಯಾಗಿದ್ದು, ಬಹ್ರೈನ್‌ನಲ್ಲಿ ನೆಲೆಸಿರುವ 25,000 ಕ್ಕೂ ಹೆಚ್ಚು ಕನ್ನಡಿಗರ ಆಶೋತ್ತರಗಳನ್ನು ಪೂರೈಸಲು ಮತ್ತು ಉತ್ತಮ ಸೇವೆ ನೀಡಲು ಸಹಾಯ ಮಾಡುತ್ತದೆ. ಕರ್ನಾಟಕ ಸರ್ಕಾರದ ಹೊರತಾಗಿ, ಬಹ್ರೇನ್ ಮತ್ತು ಭಾರತದ ಹಲವಾರು ಸಂಸ್ಥೆಗಳು ಮತ್ತು ವ್ಯಕ್ತಿಗಳು ಇದರ ನಿರ್ಮಾಣ ಕಾರ್ಯದಲ್ಲಿ ಆರ್ಥಿಕವಾಗಿ ಮತ್ತು ಇತರ ರೀತಿಯಲ್ಲಿ ಬೆಂಬಲಿಸಿದ್ದಾರೆ, ಈ ಸಂದರ್ಭದಲ್ಲಿ, ನಮ್ಮ ಕನಸನ್ನು ನನಸಾಗಿಸಲು ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳು” ಎನ್ನುತ್ತಾರೆ ಶ್ರೀ ಪ್ರದೀಪ್ ಶೆಟ್ಟಿ.

Sneha Gowda

Recent Posts

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

10 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

19 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

35 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

41 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

60 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

1 hour ago