Categories: ಮುಂಬೈ

ಉಡುಪಿಯ ದಿಶಾ ಸಾವು ಪ್ರಕರಣ : ಆದಿತ್ಯ ಠಾಕ್ರೆಗೆ ಸಂಕಷ್ಟ

ಮುಂಬೈ: ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಸ್ಟ್‌ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಶಿಂಧೆ ಸರ್ಕಾರ ಈಗ ಎಸ್‌ಐಟಿ ತನಿಖೆ ನಡೆಸಲಿದ್ದು, ಶಿವಸೇನೆ ನಾಯಕ ಆದಿತ್ಯ ಠಾಕ್ರೆಗೆ ಸಂಕಷ್ಟ ಎದುರಾಗಲಿದೆ. ಡಿಐಜಿ ಶ್ರೇಣಿಯ ಅಧಿಕಾರಿಯೊಬ್ಬರು ಈ ಎಸ್‌ಐಟಿಯ ಕೆಲಸವನ್ನು ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ದಿಶಾ ಸಾಲಿಯಾನ್ ಪ್ರಕರಣಕ್ಕೆ ಕುರಿತು ಆದಿತ್ಯ ಠಾಕ್ರೆ ವಿರುದ್ಧ ತನಿಖೆಗೆ ಹಲವು ಶಾಸಕರು ಆಗ್ರಹಿಸಿದ್ದಾರೆ. ಎಸ್‌ಐಟಿ ರಚನೆಯಾಗಲಿದ್ದು, ತನಿಖೆ ಆರಂಭವಾಗಲಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆಯಲ್ಲಿ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ವಿಷಯವನ್ನು ಪ್ರಸ್ತಾಪಿಸಲಾಗಿತ್ತು. ಆಗ ಶಿವಸೇನಾ ಶಾಸಕ ಭರತ್ ಗೋಗವ್ಲೆ ಮತ್ತು ಶಿಂಧೆ ಬಣದ ಬಿಜೆಪಿ ಶಾಸಕ ನಿತೇಶ್ ರಾಣೆ ಕೂಡ ದಿಶಾ ಸಾಲಿಯಾನ್ ಸಾವಿನ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ತನಿಖೆಗೆ ಒತ್ತಾಯಿಸಿದ್ದಾರೆ.

ಸುಶಾಂತ್ ಅವರ ಮಾಜಿ ಗೆಳತಿ ರಿಯಾ ಚಕ್ರವರ್ತಿ ಅವರ ಫೋನ್‌ಗೆ ‘AU’ ಹೆಸರಿನ ಕರೆಗಳು 44 ಬಾರಿ ಬಂದಿವೆ ಎಂದು ಶಿಂಧೆ ಗುಂಪಿನ ರಾಹುಲ್ ಶೆವಾಲೆ ಮಾಹಿತಿ ನೀಡಿದ್ದಾರೆ. ನಿಖರವಾಗಿ AU ಯಾರು ಎಂಬುದರ ಕುರಿತು ತನಿಖೆಗೆ ನಡೆಯಲು ಒತ್ತಾಯಿಸಿದ್ದಾರೆ. ದಿಶಾ ಸಾಲಿಯಾನ್ ಸಾವಿನ ಪ್ರಕರಣದಲ್ಲಿ ಆದಿತ್ಯ ಠಾಕ್ರೆ ಅವರನ್ನು ನಾರ್ಕೋ ಪರೀಕ್ಷೆಗೆ ಒಳಪಡಿಸಬೇಕು ಎಂದು ನಿತೇಶ್ ರಾಣೆ ಆಗ್ರಹಿಸಿದ್ದರು.

9 ಜೂನ್ 2020 ರಂದು, ಮುಂಬೈನ ಮಲಾಡ್‌ನಲ್ಲಿರುವ ಕಟ್ಟಡದ 14 ನೇ ಮಹಡಿಯಿಂದ ಬಿದ್ದು ದಿಶಾ ಸಾಲಿಯಾನ್ ಮೃತಪಟ್ಟಿದ್ದರು. ಸುಶಾಂತ್ 5 ದಿನಗಳ ನಂತರ ಅಂದರೆ 14 ಜೂನ್ 2020 ರಂದು ನಿಧನರಾದರು. ದಿಶಾ ಸಾವಿಗೂ ಸುಶಾಂತ್ ಸಾವಿಗೂ ಸಂಬಂಧ ಕಲ್ಪಿಸಲಾಗಿತ್ತು. 28 ವರ್ಷದ ದಿಶಾ ಸಾವಿನ ನಂತರ ಮುಂಬೈ ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿದ್ದಾರೆ.

Ramya Bolantoor

Recent Posts

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

4 mins ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

16 mins ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

30 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಗೆ ಹಣಕಾಸಿನ ಸಮಸ್ಯೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ…

43 mins ago

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

54 mins ago

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

9 hours ago