News Karnataka Kannada
Sunday, April 28 2024
ಮುಂಬೈ

ಮುಂಬೈನ ಪ್ರೈಮ್ ಮಾಲ್‌ನಲ್ಲಿ ಭಾರೀ ಅಗ್ನಿ ಅವಘಡ

Fire Iran 13072021
Photo Credit :

ಮುಂಬೈ:ಮುಂಬೈನ ವೈಲ್ ಪಾರ್ಲೆ ವೆಸ್ಟ್‌ನಲ್ಲಿರುವ ಪ್ರೈಮ್ ಮಾಲ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. 13 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.ಮುಂಬೈನ ವೈಲ್ ಪಾರ್ಲೆ ವೆಸ್ಟ್‌ನಲ್ಲಿರುವ ಪ್ರೈಮ್ ಮಾಲ್‌ನ ಮೊದಲ ಮಹಡಿಯಲ್ಲಿ ಶುಕ್ರವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಾಲ್ಕು ಅಂತಸ್ತಿನ ಮಾಲ್‌ನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅಗ್ನಿಶಾಮಕ ದಳಗಳಿಂದ ಕಾರ್ಯಾಚರಣೆಗಳು ನಡೆಯುತ್ತಿವೆ.13 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ. ಯಾವುದೇ ಸಾವು ನೋವುಗಳಾದ ವರದಿಯಾಗಿಲ್ಲ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

‘ಇಲ್ಲಿಯವರೆಗೆ, ಪ್ರೈಮ್ ಮಾಲ್‌ನಲ್ಲಿ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ಅವಘಡದಲ್ಲಿ ಯಾರಿಗೂ ಗಾಯಗಳ ಬಗ್ಗೆ ವರದಿಯಾಗಿಲ್ಲ ‘ ಎಂದು ಅಧಿಕಾರಿ ತಿಳಿಸಿದ್ದಾರೆ.’ಕನಿಷ್ಠ 13 ಅಗ್ನಿಶಾಮಕ ಇಂಜಿನ್‌ಗಳು, ಎಂಟು ನೀರಿನ ಟ್ಯಾಂಕರ್‌ಗಳು ಮತ್ತು ಇತರ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ ಮತ್ತು ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದೆ’ ಎಂದು ಅಧಿಕಾರಿ ತಿಳಿಸಿದ್ದಾರೆ.

ನಗರದಲ್ಲಿ ಈ ವಾರದಲ್ಲಿ ಇದುವರೆಗೆ ವರದಿಯಾದ ಮೂರನೇ ದೊಡ್ಡ ಬೆಂಕಿ ಅವಘಡದ ಘಟನೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು