ಸಧ್ಯಕ್ಕೆ ಕುಂದ್ರಾಗಿಲ್ಲ ಬಿಡುಗಡೆಯ ಭಾಗ್ಯ

ಮುಂಬೈ: ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದ ಆರೋಪಿಯಾಗಿರುವ  ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಆಗಸ್ಟ್ 20ರವರೆಗೂ ಜಾಮೀನು ದೊರೆಯುವುದಿಲ್ಲ..
ಉದ್ಯಮಿ ರಾಜ್ ಕುಂದ್ರಾಗೆ ಬಿಡುಗಡೆ ಭಾಗ್ಯ ಸದ್ಯಕ್ಕೆ ಕಾಣುತ್ತಿಲ್ಲ. ರಾಜ್ ಕುಂದ್ರಾ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂಬೈ ಕೋರ್ಟ್ ಆಗಸ್ಟ್ 20ಕ್ಕೆ ಮುಂದೂಡಿದ್ದು. ಅದರಂತೆ ಆಗಸ್ಟ್ 20ರವೆರೆಗೂ ಅವರು ಬಿಡುಗಡೆಯಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ.
ರಾಜ್ ಕುಂದ್ರಾ ಮಾತ್ರವಲ್ಲದೇ ಅವರ ಸಹಚರ ಮತ್ತು ಪ್ರಕರಣದ ಮತ್ತೋರ್ವ ಆರೋಪಿ ರ್ಯಾನ್ ಥಾರ್ಪೆ ಜಾಮೀನು ಅರ್ಜಿಯನ್ನೂ ಕೂಡ ಆಗಸ್ಟ್ 20ಕ್ಕೆ ಮುಂದೂಡಲಾಗಿದೆ.
ಈ ಹಿಂದೆ ತಮ್ಮ ಬಂಧನವನ್ನು ಪ್ರಶ್ನಿಸಿ ಮತ್ತು ಕೂಡಲೇ ಬಿಡುಗಡೆ ಮಾಡುವಂತೆ ಕೋರಿ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಮೇಲ್ಮನವಿಯನ್ನು ತಿರಸ್ಕರಿಸಿದೆ.  ಜುಲೈ 27ರಂದು ಮುಂಬೈನ ನ್ಯಾಯಾಲಯವೊಂದು ರಾಜ್ ಕುಂದ್ರಾಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿತ್ತು. ಈ ಕುರಿತು ಬಾಂಬೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದ ರಾಜ್​ ಕುಂದ್ರಾ ಮತ್ತು ರಿಯಾನ್ ಥಾರ್ಪೆ, ಬಂಧನದ ಪ್ರಕ್ರಿಯೆ ಸರಿಯಾಗಿ ನಡೆದಿರಲಿಲ್ಲ ಎಂದು ಹೇಳಿ, ಬಿಡುಗಡೆಗೊಳಿಸುವಂತೆ ಕೋರಿದ್ದರು. ಆದರೆ ಇದನ್ನು ವಿಚಾರಣೆ ನಡೆಸಿದ ನ್ಯಾಯಾಲಯವು, ಬಂಧನದ ಪ್ರಕ್ರಿಯೆಯಲ್ಲಿ ಯಾವುದೇ ದೋಷವಿಲ್ಲ. ಮತ್ತು ಸೆಷನ್ ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದೂ ಸರಿಯಾಗಿದೆ ಎಂದು ಹೇಳಿತ್ತು.
Raksha Deshpande

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

2 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

3 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

3 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

3 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

4 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

4 hours ago