Categories: ಮುಂಬೈ

ಮರಣದಂಡನೆ ಶಿಕ್ಷೆಯನ್ನು, ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿ ಬಾಂಬೆ ಹೈಕೋರ್ಟ್‌

ಮುಂಬೈ: ಮುಂಬೈನಲ್ಲಿ ಫೋಟೊ ಜರ್ನಲಿಸ್ಟ್‌ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಮೂವರು ಅಪರಾಧಿಗಳಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿ ಬಾಂಬೆ ಹೈಕೋರ್ಟ್‌ ಗುರುವಾರ ಆದೇಶಿಸಿತು.

ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ಸಾಧನಾ ಜಾಧವ್‌ ಹಾಗೂ ಪೃಥ್ವಿರಾಜ್‌ ಚವಾಣ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ‘ಅಪರಾಧಿಗಳು ತಾವು ಎಸಗಿದ ಕೃತ್ಯಕ್ಕಾಗಿ ಬದುಕಿರುವವರೆಗೆ ಪಶ್ಚಾತ್ತಾಪ ಪಡಬೇಕು’ ಎಂದು ಹೇಳಿತು.ವಿಜಯ್ ಜಾಧವ್, ಮೊಹಮ್ಮದ್‌ ಕಾಸಿಮ್ ಶೇಖ್‌ ಹಾಗೂ ಮೊಹಮ್ಮದ್‌ ಅನ್ಸಾರಿ ಅಪರಾಧಿಗಳು.

‘ಅತ್ಯಾಚಾರ ಎಂಬುದು ಮಾನವ ಹಕ್ಕುಗಳ ಉಲ್ಲಂಘನೆ. ಈ ಮೂವರು ಎಸಗಿದ ಕೃತ್ಯ ಸಮಾಜದ ಆತ್ಮಸಾಕ್ಷಿಯನ್ನೇ ಅಲುಗಾಡಿಸಿತ್ತು. ಆದರೆ, ಅಪರಾಧಿಗಳನ್ನು ಗಲ್ಲಿಗೇರಿಸಿದರೆ ಅದು ಪಶ್ಚಾತ್ತಾಪ ಪಡುವ ಅವಕಾಶಕ್ಕೆ ಅಂತ್ಯ ಹಾಡಿದಂತೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಮುಂಬೈನಲ್ಲಿರುವ ಶಕ್ತಿ ಮಿಲ್ಸ್‌ನ ಆವರಣದಲ್ಲಿ 2013ರ ಆಗಸ್ಟ್‌ 22ರಂದು ಈ ಮೂವರು, 22 ವರ್ಷದ ಫೋಟೊ ಜರ್ನಲಿಸ್ಟ್‌ ಮೇಲೆ ಅತ್ಯಾಚಾರ ಎಸಗಿದ್ದರು.

ವಿಚಾರಣಾ ಕೋರ್ಟ್‌ ಈ ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ 2014ರ ಮಾರ್ಚ್‌ನಲ್ಲಿ ಆದೇಶಿಸಿತ್ತು.

Gayathri SG

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

5 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

18 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

33 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

54 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago