News Karnataka Kannada
Tuesday, April 30 2024
ಮುಂಬೈ

ನಟಿ ಕಂಗನಾಗೆ ಗೋಮಾಂಸ ಇಷ್ಟವಂತೆ: ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿಯ ಲೋಕಸಭಾ ಅಭ್ಯರ್ಥಿಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ನನಗೆ ಗೋಮಾಂಸ ಇಷ್ಟ ಅಂದಿದ್ದರು ಎಂದು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿದ್ದಾರೆ.
Photo Credit : NewsKarnataka

ಮುಂಬೈ: ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿಯ ಲೋಕಸಭಾ ಅಭ್ಯರ್ಥಿಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ನನಗೆ ಗೋಮಾಂಸ ಇಷ್ಟ ಅಂದಿದ್ದರು ಎಂದು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿದ್ದಾರೆ.

ಅವರು ಮಹಾರಾಷ್ಟ್ರದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿ, ತಾನು ಗೋಮಾಂಸವನ್ನು ಇಷ್ಟಪಡುತ್ತೇನೆ ಮತ್ತು ತಿನ್ನುತ್ತೇನೆ ಎಂದು ಎಕ್ಸ್‌ನಲ್ಲಿ ಬರೆದಿದ್ದ ರಣಾವತ್‌ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕ ವಿಜಯ್ ವಡೆತ್ತಿವಾರ್ ಅವರ ಮಾತಿಗೆ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ ಪ್ರತಿಕ್ರಿಯಿಸಿದ್ದು, ಇದು ಕಾಂಗ್ರೆಸ್‌ನ ಕೊಳಕು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಇದು ಪಕ್ಷದ ಸೋಲಿನ ಮನಸ್ಥಿತಿಯನ್ನು ತೋರಿಸುತ್ತದೆ ಎಂದರು.

ಬಿಜೆಪಿ ನಾಯಕಿ ಶೈನಾ ಎನ್‌ಸಿ ಅವರು ಕಾಂಗ್ರೆಸ್ ಅನ್ನು “ಮಹಿಳಾ ವಿರೋಧಿ” ಎಂದು ಆರೋಪಿಸಿದರು. ಅಲ್ಲದೇ ಜೂನ್ 4 ರಂದು ಭಾರತದ ಮಹಿಳೆಯರು ಕಾಂಗ್ರೆಸ್ ಎಂಬ ಮಹಿಳಾ ವಿರೋಧಿ ಪಕ್ಷದ ವಿರುದ್ಧ ಮಾತನಾಡುತ್ತಾರೆ ಮತ್ತು ಮತ ಚಲಾಯಿಸಿದಾಗ ಅದಕ್ಕೆ ತಕ್ಕ ಉತ್ತರ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು