Categories: ಮುಂಬೈ

ಆರು ಅಂತಸ್ತಿನ ಕಾರ್ಪೊರೇಟ್‌ ಪಾರ್ಕ್‌ ಅಗ್ನಿ ಅವಘಡ : 50 ಮಂದಿ ರಕ್ಷಣೆ

ಮುಂಬೈ: ಮುಂಬೈಯ ಉಪನಗರ ಮುಳುಂಡ್‌ನಲ್ಲಿ ಆರು ಅಂತಸ್ತಿನ ಕಾರ್ಪೋರೇಟ್‌ ಪಾರ್ಕ್‌ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಅದರಲ್ಲಿ ಸಿಲುಕಿದ್ದ ಸುಮಾರು 50 ಮಂದಿಯನ್ನು ರಕ್ಷಿಸಲಾಗಿದೆ. ಈ ಘಟನೆ ಬೆಳಿಗ್ಗೆ ಸುಮಾರಿಗೆ ನಡೆದಿದೆ. ಮೆಟ್ಟಿಲು ಮತ್ತು ಏಣಿಗಳ ಸಹಾಯದಿಂದ ಕಟ್ಟಡದ ವಿವಿಧ ಮಹಡಿಗಳಲ್ಲಿ ಸಿಲುಕಿಕೊಂಡಿದ್ದ ಜನರನ್ನು ರಕ್ಷಿಸಿ ಸ್ಥಲಾಂತರಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರನೇ ಮಹಡಿಯಲ್ಲಿರುವ ಏವಿಯರ್‌ ಕಾರ್ಪೊರೇಟ್‌ ಪಾರ್ಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿದ್ದ 1000 ಚದರ ಅಡಿ ವಿಸ್ತೀರ್ಣ ವೈರಿಂಗ್‌, ವಿದ್ಯುತ್‌ ಪರಿಕರ, ಎಸಿ ಘಟಕ, ಪಿಠೋಪಕರಣ ಹಾಗೂ ಕಚೇರಿಯ ದಾಖಲೆಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು ವಿಷಯ ತಿಳಿದ ಕೂಡಲೆ ನಾಲ್ಕು ಅಗ್ನಿಶಾಮಕ ವಾಹನಗಳು, ಮೂರು ಬೃಹತ್‌ ನೀರಿನ ಟ್ಯಾಂಕರ್‌ಗಳು ಸ್ಥಳಕ್ಕೆ ಧಾವಿಸಿದವು ಎಂದು ಹೇಳಿದ್ದಾರೆ. ಹಾಗೂ ಮುಂಬೈ ಪೊಲೀಸ್‌. ಬೃಹನ್‌ ಮುಂಬೈ ಮುನ್ಸಿಪಲ್‌ ಕಾರ್ಪೊರೇಷನ್‌ ಸಿಬ್ಬಂದಿ ಅಗ್ನಿ ನಂದಿಸಲು ನೆರವಾದರು.

 

Nisarga K

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

4 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

4 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

4 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

5 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

5 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

5 hours ago