ಮುಂಬೈ: ಕೇಂದ್ರದ ಮಾಜಿ ಸಚಿವ ಬಾಬನ್ ರಾವ್ ಧಕ್ನೆ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಧಕ್ನೆ ಅವರು ಮೂಲತ ಮಹಾರಾಷ್ಟ್ರ ರಾಜ್ಯದವರು. ಅನಾರೋಗ್ಯದಿಂದಾಗಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ರಾತ್ರಿ ಧಕ್ನೆ ನಿಧನರಾದರು ಎಂದು ಅವರ ಕುಟುಂಬದವರು ಹೇಳಿದ್ದಾರೆ. ಜನತಾ ಪರಿವಾರದಲ್ಲಿ ಅವರು ಗುರುತಿಸಿಕೊಂಡಿದ್ದ ಅವರು ದಿವಂಗತ ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರ ಸಂಪುಟದಲ್ಲಿ ಇಂಧನ ಸಚಿವರಾಗಿದ್ದರು. ಧಕ್ನೆ ನಿಧನಕ್ಕೆ ರಾಜಕೀಯ ಮುಖಂಡರು ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕೇಂದ್ರದ ಮಾಜಿ ಸಚಿವ ಬಾಬನ್ ರಾವ್ ಧಕ್ನೆ ನಿಧನ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.