News Karnataka Kannada
Sunday, May 05 2024
ಮುಂಬೈ

ಡಿಜಿಟಲ್‌ ಬ್ಯಾಂಕಿಂಗ್‌ ವಂಚನೆ : ಐಸಿಐಸಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಚ್ಚರಿಕೆ

ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಐಸಿಐಸಿಐ ಬ್ಯಾಂಕ್‌ನ ಮೊಬೈಲ್‌ ಬ್ಯಾಂಕಿಗ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಇದುವರೆಗು ಸುಮಾರು 17 ಸಾವಿರ ಗ್ರಾಹಕರ ಡೆಬಿಟ್‌ ಅಥವಾ ಕ್ರೆಡಿಟ್‌ ಕಾರ್ಡ್‌ ಮಾಹಿತಿ ಬಹಿರಂಗವಾಗಿದೆ ಎಂಬ ಕುರಿತು ದೂರುಗಳು ವ್ಯಕ್ತವಾಗಿವೆ. ಹಾಗಾಗಿ ಐಸಿಐಸಿಐ ಬ್ಯಾಂಕ್‌ ಗ್ರಾಹಾಕರಿಗೆ ಎಚ್ಚರಿಕೆ ಗಂಟೆ ಬಾರಿಸಿದೆ.
Photo Credit : NewsKarnataka

ಮುಂಬೈ:  ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಐಸಿಐಸಿಐ ಬ್ಯಾಂಕ್‌ನ ಮೊಬೈಲ್‌ ಬ್ಯಾಂಕಿಗ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಇದುವರೆಗು ಸುಮಾರು 17 ಸಾವಿರ ಗ್ರಾಹಕರ ಡೆಬಿಟ್‌ ಅಥವಾ ಕ್ರೆಡಿಟ್‌ ಕಾರ್ಡ್‌ ಮಾಹಿತಿ ಬಹಿರಂಗವಾಗಿದೆ ಎಂಬ ಕುರಿತು ದೂರುಗಳು ವ್ಯಕ್ತವಾಗಿವೆ. ಹಾಗಾಗಿ ಐಸಿಐಸಿಐ ಬ್ಯಾಂಕ್‌ ಗ್ರಾಹಾಕರಿಗೆ ಎಚ್ಚರಿಕೆ ಗಂಟೆ ಬಾರಿಸಿದೆ.

ಐಸಿಐಸಿಐ ಬ್ಯಾಂಕ್‌ನ ಐ ಮೊಬೈಲ್‌ ಪೇ ಎಂಬ ಅಪ್ಲಿಕೇಶನ್‌ನಲ್ಲಿ (App) ಭಾರಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದಾಗಿ ಸಾವಿರಾರು ಗ್ರಾಹಕರ ಕ್ರೆಡಿಟ್‌ ಕಾರ್ಡ್‌ಗಳ ಮಾಹಿತಿ ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ. ಟೆಕ್ನೊಫಿನೋ ಸಂಸ್ಥೆಯ ಸಂಸ್ಥಾಪಕ ಸುಮಂತಾ ಮಂಡಲ್‌ ಅವರು ತಾಂತ್ರಿಕ ದೋಷ ಹಾಗೂ ಮಾಹಿತಿ ಸೋರಿಕೆ ಕುರಿತು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದು, ಆರ್‌ಬಿಐ ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.

“ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್‌ ಕಾರ್ಡ್‌ ಹೊಂದಿರುವ ಸಾವಿರಾರು ಗ್ರಾಹಕರಿಗೆ ತೊಂದರೆಯಾಗಿದೆ. ಅದರಲ್ಲೂ, ಐ ಮೊಬೈಲ್‌ ಪೇ ಅಪ್ಲಿಕೇಷನ್‌ನಲ್ಲಿ ಭಾರಿ ದೋಷ ಕಾಣಿಸಿಕೊಂಡಿದೆ. ಕ್ರೆಡಿಟ್‌ ಕಾರ್ಡ್‌ ನಂಬರ್‌, ಎಕ್ಸ್‌ಪೈರಿ ಡೇಟ್‌, ಸಿವಿವಿ ಸೇರಿ ಎಲ್ಲ ಮಾಹಿತಿಯು ಅಪ್ಲಿಕೇಷನ್‌ನಲ್ಲಿ ಬಹಿರಂಗವಾಗಿ ಕಾಣಿಸುತ್ತಿದೆ. ಅಂತಾರಾಷ್ಟ್ರೀಯ ಟ್ರಾನ್ಸ್ಯಾಕ್ಷನ್‌ ಸೆಟಿಂಗ್ಸ್‌ ಕೂಡ ಬದಲಾಯಿಸಬಹುದಾಗಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಟ್ರಾನ್ಸ್ಯಾಕ್ಷನ್‌ ಮಾಡಲು ಬೇರೆಯವರ ಕ್ರೆಡಿಟ್‌ ಕಾರ್ಡ್‌ ಮಾಹಿತಿಯನ್ನು ದುರುಪಯೋಗ ಮಾಡಿಕೊಳ್ಳಬಹುದಾಗಿದೆ” ಎಂದು ಅವರು ದೂರಿದ್ದಾರೆ.

ಇದಕ್ಕೆ ಪ್ರತಿಕಕ್ರಿಯೆ ನೀಡಿದ ಐಸಿಐಸಿಐ ಬ್ಯಾಂಕ್‌ ತಾಂತ್ರಿಕ ದೋಷದಿಂದಾಗಿ ಇಷ್ಟೆಲ್ಲಾ ಸಮಸ್ಯೆ ಹುಟ್ಟಿಕೊಂಡಿದೆ. ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರ ಪೈಕಿ ಶೇ.0.1ರಷ್ಟು ಗ್ರಾಹಕರಿಗೆ ತೊಂದರೆಯಾಗಿದೆ. ಗ್ರಾಹಕರ ಹಿತದೃಷ್ಟಿಯಿಂದಾಗಿ ಕೂಡಲೇ ಎಲ್ಲ ಕಾರ್ಡ್‌ಗಳನ್ನು ಬ್ಲಾಕ್‌ ಮಾಡಿದ್ದೇವೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದ್ದು, ಶೀಘ್ರವೇ ಬಗೆಹರಿಸಲಾಗತ್ತದೆ. ಯಾರದರೂ ಹಣ ಕಳೆದುಕೊಂಡಿದ್ದರೆ ಕಸ್ಟಮರ್‌ ಕೇರ್‌ಗೆ ಕರೆ ಮಾಡಿ” ಎಂಬುದಾಗಿ ಬ್ಯಾಂಕ್‌ ಮನವಿ ಮಾಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು