Categories: ಮುಂಬೈ

ಐಟಿ, ಇಡಿ, ಸಿಬಿಐ ದಾಳಿಗೆ ಹೆದರಿ ಬಿಜೆಪಿಗೆ ಸೇರ್ಪಡೆ : ಸುಪ್ರಿಯಾ ಸುಳೆ

ಮುಂಬೈ: ವಿರೋಧ ಪಕ್ಷದ ನಾಯಕರು ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಇಷ್ಟಪಟ್ಟು ಹೋಗುತ್ತಿಲ್ಲ. ಚುನಾವಣಾ ಆಯೋಗ, ಐಟಿ, ಸಿಬಿಐ, ಇಡಿ ದಾಳಿಗೆ ಹೆದರಿ ಬಿಜೆಪಿ ಪಕ್ಷವನ್ನು ಸೇರಿಕೊಳ್ಳುತ್ತಿದ್ದಾರೆ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ವಾಗ್ದಾಳಿ ನಡೆಸಿದ್ದಾರೆ.

2009 ರಿಂದ ಪ್ರತಿನಿಧಿಸುತ್ತಿರುವ ಬಾರಾಮತಿ ಸಂಸದೀಯ ಕ್ಷೇತ್ರದಿಂದ ಹಿರಿಯ ರಾಜಕಾರಣಿ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದು, 1996 ರಿಂದ 2009ರ ವರೆಗೆ ಈ ಕ್ಷೇತ್ರದಲ್ಲಿ ಶರದ್‌ ಪವಾರ್‌ ಪ್ರತಿನಿಧಿಸಿದ್ದರು.

ಚುನಾವಣಾ ಪ್ರಚಾರ ಸಿದ್ಧತೆ ನಡೆಸುತ್ತಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರವಿಂದ್‌ ಕೇಜ್ರಿವಾಲ್‌ ಬಂಧನ ಪ್ರಕರಣದ ಕುರಿತು ಮಾತನಾಡುತ್ತಾ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ.  ಭಾರತೀಯ ಚುನಾವಣಾ ಆಯೋಗ, ಐಟಿ, ಇಡಿ, ಸಿಬಿಐ ತನಿಖಾ ಸಂಸ್ಥೆಗಳು ಎಲ್ಲವೂ ಅವರ ಬಳಿಯೇ ಇದೆ. ಇವುಗಳನ್ನು ಬಳಸಿ ಬಿಜೆಪಿ ದಾಳಿ ಮಾಡಿಸುತ್ತಾರೆ ಅಂತಾ ಹೆದರಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಇದೇ ಕಾರಣಕ್ಕಾಗಿ ಕಳೆದ ತಿಂಗಳು ಅಶೋಕ್ ಶಂಕರರಾವ್ ಚವ್ಹಾಣ್‌ ಅವರೂ ಬಿಜೆಪಿ ಸೇರಿದರು. ಬಿಜೆಪಿಯವರು ಎಲ್ಲಾ ಪಕ್ಷಗಳನ್ನು ಹೀಗೆ ಒಡೆಯುತ್ತಿದ್ದಾರೆ. ಇದು ರಾಜಕೀಯವಲ್ಲ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಾಗ್ದಾಳಿ ನಡೆಸಿದ್ದಾರೆ.

 

Chaitra Kulal

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

5 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

5 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

5 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

5 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

7 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

7 hours ago